ಸಾರಾಂಶ
ಕನ್ನಡಪ್ರಭ ವಾರ್ತೆ ಬೇಲೂರು
ಮೈಸೂರಿನ ಸುತ್ತೂರು ಕ್ಷೇತ್ರದ ಶಿವರಾತ್ರಿಶ್ವರ ಶಿವಯೋಗಿ ಜಾತ್ರಾ ಮಹೋತ್ಸವ ಜ ೨೬ ರಿಂದ ೩೧ರ ತನಕ ನಡೆಯಲಿದ್ದು, ನಾಡಿನ ಭಕ್ತರು ಭಾಗವಹಿಸಲಿ ಎಂಬ ಉದ್ದೇಶದಿಂದ ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥ ವಿವಿಧ ಭಾಗದಲ್ಲಿ ಸಂಚರಿಸಿ, ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಠದ ಅಭಿಮಾನಿಗಳು ಬರಮಾಡಿಕೊಂಡರು.ಪಟ್ಟಣದ ಹೃದಯ ಭಾಗದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಸಂದರ್ಭದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ತಾಲೂಕು ಜಾನಪದ ಪರಿಷತ್ತು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಶ್ರೀ ಶಿವರಾತ್ರೀಶ್ವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ಸುತ್ತೂರಿನಲ್ಲಿ ನಡೆಯುವ ಜಾತ್ರಾ ಮಹೋತ್ಸವ ಇಲ್ಲಿನ ಪರಮಪೂಜ್ಯ ಜಗದ್ಗುರು ಡಾ.ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿದೆ. ಮಠಾಧೀಶ್ವರದಿಂದ ಧಾರ್ಮಿಕ ಚಿಂತನ ಗೋಷ್ಟಿಗಳು, ಉಪನ್ಯಾಸ, ಮಹಿಳಾಗೋಷ್ಟಿ, ಕವಿಗಳು ಸಾಹಿತಿಗಳು ಸೇರಿದಂತೆ ಎಲ್ಲಾ ರಾಜಕೀಯ ಮುಖಂಡರು ಆಗಮಿಸಲಿದ್ದಾರೆ. ವಿಶೇಷವಾಗಿ ಇಲ್ಲಿ ನಡೆಯುವ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ ನಿಜಕ್ಕೂ ಅಗಮ್ಯವಾಗಿರುತ್ತದೆ. ಪ್ರತಿನಿತ್ಯ ನಿರಂತರ ದಾಸೋಹ ನಡೆಸಲಾಗುತ್ತದೆ. ಇಂತಹ ಅರ್ಥಪೂರ್ಣ ಜಾತ್ರೆಯಲ್ಲಿ ಸರ್ವರೂ ಭಾಗವಹಿಸಬೇಕಿದೆ ಎಂದರು.
ಬೇಲೂರು ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಘಟಕದ ಅಧ್ಯಕ್ಷ ಎ.ಎಸ್.ಬಸವರಾಜು, ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷ ವೈ.ಎಸ್.ಸಿದ್ದೇಗೌಡ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾ.ನ.ಮಂಜೇಗೌಡ ಹಾಗೂ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಅದ್ಧೂರಿ ಚೇತನ್ ಕುಮಾರ್ ಸುತ್ತೂರು ಮಠ ಪರಂಪರೆಯ ಬಗ್ಗೆ ಮಾತನಾಡಿದರು.ಕಾರ್ಯಕ್ರಮದಲ್ಲಿ ದೇಗುಲ ಸಮಿತಿ ಅಧ್ಯಕ್ಷ ಡಾ. ನಾರಾಯಣಸ್ವಾಮಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷ ಬಿ.ಎಲ್.ರಾಜೇಗೌಡ, ತಾಲೂಕು ಶರಣ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷ ಮ.ಶಿವಮೂರ್ತಿ, ತಾಲೂಕು ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಬಳ್ಳೂರು ಮದನ್, ತಾಲೂಕುವೀರಶೈವ ಮಹಾಸಭಾ ಯುವ ಘಟಕದ ಮಾಜಿ ಅಧ್ಯಕ್ಷ ಗೆಂಡೇಹಳ್ಳಿ ಚೇತನ್, ಮಾಜಿ ಮಹಿಳಾ ಅಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ತಾಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಗಣೇಶ, ತಾಲೂಕು ಜಾನಪದ ಪರಿಷತ್ತು ಪ್ರಧಾನ ಕಾರ್ಯದರ್ಶಿ ಧನಂಜಯ, ಗುತ್ತಿಗೆದಾರರಾದ ಹೆಬ್ಬಾಳು ಪುಟ್ಟಸ್ವಾಮಿ, ಕೌರಿ ರಾಜಶೇಖರ, ಗಿರೀಶ್, ಬ್ಯಾಡರಹಳ್ಳಿ ಅನಂದ್, ತೋಟೇಶ್, ಕಸಾಪ ಸಂಘಟನಾ ಕಾರ್ಯದರ್ಶಿ ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಇತರರು ಇದ್ದರು.