ಸಾರಾಂಶ
ದೊಡ್ಡಬಳ್ಳಾಪುರ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖಿಸಿದರು.
ದೊಡ್ಡಬಳ್ಳಾಪುರ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ಶಿವಪುರ ಧ್ವಜ ಸತ್ಯಾಗ್ರಹ ಘಟನೆಯನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಸ್ವಾತಂತ್ರ್ಯ ಹೋರಾಟಗಾರ ಟಿ.ಸಿದ್ದಲಿಂಗಯ್ಯ ಅವರ ನೇತೃತ್ವದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರ ವಿಚಾರಧಾರೆಗಳನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
ಬೆಂ.ಗ್ರಾ. ಜಿಲ್ಲೆಯಲ್ಲಿ ಸಮ್ಮೇಳನಕ್ಕೆ ಒತ್ತಾಯ: ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕಿನ ಕಸಾಪ ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಒತ್ತಾಯಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಅಖಿಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನಿವೃತ್ತ ಅಧ್ಯಾಪಕ. ವಿ.ಎಸ್.ಹೆಗಡೆ, ಶಿಕ್ಷಕರುಗಳಾದ ಎಚ್.ಎನ್.ಪ್ರಕಾಶ್, ಕೋದಂಡರಾಮ್, ಸಿ.ಅಣ್ಣಯ್ಯ ಭಾಗವಹಿಸಿದ್ದರು.21ಕೆಡಿಬಿಪಿ1-
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರದ ಸಾಹಿತ್ಯಾಸಕ್ತರು ಮಂಡ್ಯದಲ್ಲಿ ಭಿತ್ತಿಪತ್ರ ಪ್ರದರ್ಶಿಸಿದರು.