ಸಾರಾಂಶ
ದೊಡ್ಡಬಳ್ಳಾಪುರ: ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸ್ವಾಗತಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ನೇತೃತ್ವದಲ್ಲಿ ಸಂಭ್ರಮದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ಇದೇ 14ರಂದು ಶುಕ್ರವಾರ ಬೆಳಗ್ಗೆ 9ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ. ಮಾರ್ಗಮಧ್ಯೆ ಸಾದಹಳ್ಳಿಯ ಟೋಲ್ ಬಳಿ ಸಾವಿರಾರು ಕಾರ್ಯಕರ್ತರು ಸೇರಿ ಎಚ್‌ಡಿಕೆ ಅವರಿಗೆ ಅದ್ಧೂರಿ ಸ್ವಾಗತ ನೀಡುವುದಾಗಿ ವಿವರಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಬಹುಮತದಿಂದ ಸಂಸದರಾಗಿ ಆಯ್ಕೆಯಾದ ಕುಮಾರಸ್ವಾಮಿ, ಕೇಂದ್ರದಲ್ಲಿ ಉನ್ನತ ಹುದ್ದೆಗೇರಿರುವುದು ಪಕ್ಷದ ಬಲವರ್ಧನೆಗೆ ಪೂರಕವಾಗಿದೆ ಎಂದರು.ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ನೆಲಮಂಗಲ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ, ಜಿಲ್ಲೆಯ ಹಿರಿಯ ಮುಖಂಡರು, ಎಲ್ಲ 4 ತಾಲೂಕುಗಳ ಜೆಡಿಎಸ್ ಅಧ್ಯಕ್ಷರು, ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಮತ್ತು ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
12ಕೆಡಿಬಿಪಿ8- ಎಚ್.ಡಿ.ಕುಮಾರಸ್ವಾಮಿ.