ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಲಾಭ ಪಡೆಯಿರಿ

| Published : Sep 21 2024, 01:53 AM IST

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಲಾಭ ಪಡೆಯಿರಿ
Share this Article
  • FB
  • TW
  • Linkdin
  • Email

ಸಾರಾಂಶ

ವಾರ್ಷಿಕೋತ್ಸವ ಸಮಾರಂಭದಲ್ಲಿ ಸೋಮನಾಥ ಪಾಟೀಲ್‌ ಸಲಹೆ

ಬೀದರ್‌: ಕುಶಲಕರ್ಮಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ್‌ ಕರೆ ನೀಡಿದರು.

ನಗರದ ಲಕ್ಷ್ಮೀಬಾಯಿ ಕಮಠಾಣೆ ಪ್ರೌಢಶಾಲೆಯಲ್ಲಿ ಶುಕ್ರವಾರ ಶ್ರೀ ಟೆಕ್ನಾಲಜಿ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೌಶಲ್ಯ ತರಬೇತಿ, ಸಾಲ ಸೇರಿದಂತೆ ಯೋಜನೆಯ ವಿವಿಧ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮಿಗಳಾಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದ 200 ಜನರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಮಾಧ್ಯಮ ಪ್ರಮುಖ ಸಂಗಮೇಶ ನಾಸಿಗಾರ್‌, ಕಾರ್ಯದರ್ಶಿ ರಾಜಕುಮಾರ ನ್ಯಾಮತಾಬಾದ್‌, ಇತರ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿ ನೀಲೇಶ್‌ ಜಾಧವ್‌, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಲೋಕೇಶ್‌, ಕಾರ್ಯಕ್ರಮದ ವಿಭಾಗೀಯ ಅಧಿಕಾರಿ ಭಾರ್ಗವ್‌, ಮಹೇಶ್‌ ಉಪಸ್ಥಿತರಿದ್ದರು.

ಶ್ರೀ ಟೆಕ್ನಾಲಜಿ ತರಬೇತಿ ಕೇಂದ್ರದ ಮುಖ್ಯಸ್ಥ ಸಂತೋಷ ರೆಡ್ಡಿ ಸ್ವಾಗತಿಸಿದರು. ಕೌಶಲ ತರಬೇತಿ ಪೂರ್ಣಗೊಳಿಸಿದ ಒಟ್ಟು 600 ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರದ ವಾರ್ಧಾದನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವದ ನೇರ ಪ್ರಸಾರ ವೀಕ್ಷಿಸಲಾಯಿತು.