ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 52 ಸಾವಿರ ಕೋಟಿ ರು.ಅನ್ನು ವಾರ್ಷಿಕವಾಗಿ ಖರ್ಚು ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್ ಹೇಳಿದ್ದಾರೆ.

ಮಡಿಕೇರಿ: ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 52 ಸಾವಿರ ಕೋಟಿ ರು.ಅನ್ನು ವಾರ್ಷಿಕವಾಗಿ ಖರ್ಚು ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್ ಹೇಳಿದ್ದಾರೆ.

ನಗರದ ಜಿಪಂ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಗ್ಯಾರಂಟಿ ಯೋಜನೆಯನ್ನು 2023ರಲ್ಲಿ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಶೇ. 98ರಷ್ಟು ಪ್ರಗತಿ ಸಾಧಿಸಿದೆ. ಆ ದಿಸೆಯಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಅವರು ಹೇಳಿದರು.ಅನ್ನಭ್ಯಗ್ಯ ಯೋಜನೆ ಬಡವರಿಗೆ ತಲುಪಬೇಕು. ಆ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಅನ್ನು ಕಡು ಬಡವರಿಗೆ ನೀಡಿ ಪಡಿತರ ವಿತರಿಸುವಂತಾಗಬೇಕು ಎಂದರು.

ಸಮಿತಿ ಸದಸ್ಯ ಅಣ್ಣಯ್ಯ ಅವರು ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಅರ್ಹ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಬಿಪಿಎಲ್ ಪಡಿತರ ಚೀಟಿ ವಿತರಿಸುವಂತಾಗಬೇಕು ಎಂದು ಕೋರಿದರು.

ಇದಕ್ಕೆ ಧ್ವನಿಗೂಡಿಸಿದ ಸಮಿತಿ ಸದಸ್ಯ ಪ್ರಶಾಂತ್ ಅವರು ಶ್ರೀಮಂಗಲ ವ್ಯಾಪ್ತಿಯಲ್ಲಿ ಹಾಡಿಯ ಹಲವು ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ತಲುಪಿಲ್ಲ. ಇದರಿಂದ ಆದಿವಾಸಿಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.ಆಹಾರ ಇಲಾಖೆ ಜಂಟಿ ನಿರ್ದೇಶಕರು ಆರು ತಿಂಗಳ ಕಾಲ ಪಡಿತರ ಆಹಾರ ಪಡೆಯದಿದ್ದರೆ ಅವರಿಗೆ ಅಗತ್ಯವಿಲ್ಲ ಎಂದು ಭಾವಿಸಬೇಕಾಗುತ್ತದೆ. ಇದರಿಂದ ಪಡಿತರ ಕಾರ್ಡುಗಳು ಅಮಾನತು ಆಗಲಿವೆ ಎಂದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಪ್ರತಿಕ್ರಿಯಿಸಿ ನಿಜವಾದ ಬಡವರಿಗೆ ಪಡಿತರ ಬಿಪಿಎಲ್ ಕಾರ್ಡ್ ತಲುಪಿಲ್ಲ. ಅರ್ಹ ಬಡವರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತಾಗಬೇಕು ಎಂದು ಅವರು ಹೇಳಿದರು.

ಶ್ರೀಮಂಗಲ ವ್ಯಾಪ್ತಿಯಲ್ಲಿ ಲೈನ್‍ಮ್ಯಾನ್‍ಗಳ ಕೊರತೆ ಇದ್ದು, ಅಲ್ಲಿದ್ದ ಲೈನ್‍ಮ್ಯಾನ್‍ಗಳನ್ನು ಬೇರೆ ಕಡೆಗೆ ನಿಯೋಜಿಸಲಾಗಿದೆ. ಆದ್ದರಿಂದ ಅಗತ್ಯ ಲೈನ್‍ಮ್ಯಾನ್‍ಗಳನ್ನು ನೇಮಕ ಮಾಡಬೇಕು ಎಂದು ಪ್ರಶಾಂತ್ ಹೇಳಿದರು.ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಚತೆಗೆ ಒತ್ತು ನೀಡುವಂತೆ ರಾಜ್ಯ ಉಪಾಧ್ಯಕ್ಷರು ನಿರ್ದೇಶನ ನೀಡಿದರು. ಸಮಿತಿ ಸದಸ್ಯರಾದ ವಿ.ಪಿ. ಶಶಿಧರ್ ಮಾತನಾಡಿ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ಮಾಡಿದರು.

ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದ ರಾಜ್ಯ ಉಪಾಧ್ಯಕ್ಷರು, ಈ ಯೋಜನೆ ಅರ್ಹರಿಗೆ ತಲುಪಬೇಕು. ಈ ಯೋಜನೆ ಅರ್ಹರಿಗೆ ತಲುಪಬೇಕು ಎಂದರು.ಜಿಲ್ಲಾ ಸಮಿತಿ ‌ಉಪಾಧ್ಯಕ್ಷ ಶರಿ‌ ಗಿರೀಶ್, ಪಂಕಜ, ಭೀಮಯ್ಯ, ನಾಸಿರ್, ಬಶೀರ್, ಸಮಿತಿ ಸಮಿತಿ ಸದಸ್ಯರಾದ ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್, ಧನ್ಯ ಮಾತನಾಡಿದರು.