ಸಾರಾಂಶ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಅಕ್ಷರ ದಾಸೋಹ ಬಿಸಿಯೂಟ ನೌಕರರು ಮಾ.4 ಮತ್ತು 5 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನಗರದಲ್ಲಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.
ಅಕ್ಷರ ದಾಸೋಹ ನಿರ್ದೇಶಕರಿಗೆ ಮನವಿ
ಶಹಾಪುರ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಅಕ್ಷರ ದಾಸೋಹ ಬಿಸಿಯೂಟ ನೌಕರರು ಮಾ.4 ಮತ್ತು 5 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನಗರದಲ್ಲಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ 26 ಸಾವಿರ ರು. ವೇತನ ಕೊಡಬೇಕು. ಬಿಸಿಯೂಟ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಜಾರಿಗೆ ತರಲು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಸಿಐಟಿಯು ಹೇಳಿದೆ.
60 ವರ್ಷ ವಯಸ್ಸು ದಾಟಿದವರಿಗೆ ಹಿಡಿ ಗಂಟು ನೀಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆ ಶಿಕ್ಷಣ ಇಲಾಖೆಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರು. ಪರಿಹಾರ ಕೊಡಬೇಕು. ಈ ಯೋಜನೆ ದೇಶದ ಮಹತ್ವದ ಯೊಜನೆಯಾಗಿ ದೇಶದಾದ್ಯಂತ ಮುಂದುವರಿದಿದೆ. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅನುದಾನಗಳನ್ನು ನಿರಂತರ ಕಡಿಮೆ ಮಾಡುತ್ತಿದೆ. ಇತರ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದೆ.ಸಂಘದ ಸಂಘದ ಗೌರವಾಧ್ಯಕ್ಷೆ ಸುನಂದ ಹಿರೇಮಠ, ಖಜಾಂಚಿ ಮಂಜುಳಾ ಹೊಸಮನಿ, ಉಪಾಧ್ಯಕ್ಷೆ ಲಾಲಬಿ, ಜಯಶ್ರೀ ಇದ್ದರು.