ಸಾರಾಂಶ
- ರೈತ ಸಂಘ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ: ಬಸವರಾಜ್ - - - ಹರಿಹರ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಚಲೋ, ವಿಧಾನಸೌಧ ಮುತ್ತಿಗೆ ಹಾಕಲಾಗುವಗುದು ಎಂದು ಸಂಘದ ಜಿಲ್ಲಾ ಅಧ್ಯಕ್ಷ ಗುಮ್ಮನೂರ್ ಬಸವರಾಜ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವೈಜ್ಞಾನಿಕ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದು ಸೇರಿದಂತೆ ೧೧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ ೨೨ರಂದು ಬೆಳಗ್ಗೆ ೧೧ ಗಂಟೆಗೆ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ೪೦೦ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಹರಿಹರ ತಾಲೂಕಿನ ಎಲ್ಲ ರೈತರು ಪಾಲ್ಗೊಳ್ಳಬೇಕು ಎಂದರು.೨ ವರ್ಷಗಳಿಂದ ಮಳೆಯಾಗದ ಕಾರಣ ರೈತರು ಸಂಪೂರ್ಣ ಕಂಗಾಲಾಗಿದ್ದಾರೆ. ಆದ್ದರಿಂದ ಎಲ್ಲ ರೈತರ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ರಾಜ್ಯ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಕ್ರಮವನ್ನು ಕೈ ಬಿಟ್ಟು ಮೊದಲಿನಂತೆ ಉಚಿತ ವಿದ್ಯುತ್ ನೀಡಬೇಕು ಎಂದು ಒತ್ತಾಹಿಸಿದರು.
ಆಲಮಟ್ಟಿ ಜಲಾಶಯ ಅಭಿವೃದ್ಧಿ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ಜಾರಿಗೆ ತರುವುದು. ಇದಲ್ಲದೇ ಭದ್ರಾ ನೀರಾವರಿ, ಭೈರನಪಾದ ಏತ ನೀರಾವರಿ ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು ಎಂದರು.ಹರಿಹರ ತಾಲೂಕಿನಲ್ಲಿ ೫೦ ಮತ್ತು ೫೭ರ ಅಡಿಯಲ್ಲಿ ಅರ್ಜಿ ಹಾಕಿ ಹಲವಾರು ವರ್ಷಗಳಿಂದ ಕಾಯುತ್ತಿರುವ ರೈತರಿಗೆ ಸಭೆ ನಡೆಸಿ, ತೀರ್ಮಾನಿಸಿ ಹಕ್ಕುಪತ್ರ ವಿತರಿಸಬೇಕು. ಅರಣ್ಯ ಹಕ್ಕು ಸಮಿತಿ ಜಾರಿಗೆ ತರಬೇಕು. ಹೊಸ ಪಡಿತರ ಚೀಟಿ ಮತ್ತು ತಿದ್ದುಪಡಿ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಯೋಜನೆಗಳನ್ನು ತಕ್ಷಣ ದೊರಕುವಂತೆ ಕ್ರಮಕ್ಕಾಗಿ ಪ್ರತಿಭಟನೆ ನಡೆಯಲಿದೆ ಎಂದರು.
ಹರಿಹರ ತಾಲೂಕು ಅಧ್ಯಕ್ಷ ಎಚ್.ಸುನೀಲ್ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಭಗತ್ ಸಿಂಗ್, ದಾವಣಗೆರೆ ತಾಲೂಕು ಅಧ್ಯಕ್ಷ ಹನುಮಂತಪ್ಪ, ಮಲ್ಲಿಕಾರ್ಜುನ್, ಸಿ.ಹನುಮಂತಪ್ಪ, ನಾಗರಾಜ್ ಇತರರಿದ್ದರು.- - - -19ಎಚ್‌ಆರ್‌ಆರ್4:
ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘದಿಂದ ಸೋಮವಾರ ಬೆಂಗಳೂರು ಚಲೋ ನಡೆಸಲಿರುವ ಕುರಿತು ದಾವಣಗೆರೆಯಲ್ಲಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.