ಜಿಲ್ಲೆಯ ಬ್ಯಾಂಕ್ ಖಾತೆಗಳಲ್ಲಿ 43 ಕೋಟಿ ನಿಷ್ಕ್ರಿಯ ಠೇವಣಿದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳ ಒಟ್ಟು ಮೌಲ್ಯ ಸುಮಾರು 43.23 ಕೋಟಿ ರುಪಾಯಿ ಹಣ ಬ್ಯಾಂಕ್ ಹಾಗೂ ಇತರೆ ಶಾಖೆಗಳಲ್ಲಿ ಹಾಗೇ ಉಳಿದಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾಹಿತಿ ನೀಡಿದರು.