ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಮಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. 

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ, ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕಾತಿ ನಡೆಯಲಿದೆ. ನ್ಯಾ. ನಾಗಮೋಹನ್‌ದಾಸ್‌ ಅವರ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿತ್ತು. 

ಈಗ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕ ಮಾತ್ರ ಆಗಿತ್ತು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದಿದೆ. ಈಗ ಮತ್ತೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದರು.