ಸಾರಾಂಶ
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿ ದೇವಿಯ ಕಂಚಿನ 25 ಅಡಿ ಎತ್ತರದ ಪ್ರತಿಮೆ ಪ್ರತಿಷ್ಠಾಪನೆ
ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿ ದೇವಿಯ ಕಂಚಿನ 25 ಅಡಿ ಎತ್ತರದ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇದೆ.
ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆ ಕೆತ್ತಲಾಗಿದೆ. ರಾಜ್ಯದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುಮಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆ ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇದೆ. ನಾಡದೇವಿ ವೀಕ್ಷಣೆಗೆ ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿರಲಿದೆ.
25 ಅಡಿ ಎತ್ತರ
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿ ದೇವಿಯ ಕಂಚಿನ 25 ಅಡಿ ಎತ್ತರದ ಪ್ರತಿಮೆ ಪ್ರತಿಷ್ಠಾಪನೆ
ನಿತ್ಯವೂ ಅರ್ಚನೆ
ಜ.27ರ ಸೋಮವಾರ ಮುಖ್ಯಮಂತ್ರಿಯಿಂದ ಪ್ರತಿಮೆ ಅನಾವರಣ. ಪ್ರತಿಮೆಗೆ ನಿತ್ಯವೂ ಅರ್ಚನೆ
22 ಕೋಟಿ ರು.ವೆಚ್ಚ
ನೆಲಮಟ್ಟದಿಂದ ಪ್ರತಿಮೆ 43.6 ಅಡಿ ಎತ್ತರವಿದೆ. ಪ್ರತಿಮೆಯ ಒಟ್ಟು ತೂಕ 31.50 ಟನ್. 22 ಕೋಟಿ ರು.ವೆಚ್ಚ