ಸಾರಾಂಶ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ವಾರಸುದಾರರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಡೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ವಾರಸುದಾರರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಡೂರಿನಲ್ಲಿ ಭಾನುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸಭೆ ನಡೆಸಿ ಕಳಪೆ ಔಷಧ ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಅವರನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಿದ್ದೇನೆ. ಅಲ್ಲಿನ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು. ಬಾಣಂತಿಯರ ಸಾವಿನ ಪ್ರಕರಣದ ತನಿಖೆಗಾಗಿ ಒಂದು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಶನಿವಾರ ಸರ್ಕಾರ 2 ಲಕ್ಷ ರು. ಪರಿಹಾರ ಘೋಷಿಸಿತ್ತು. ಈ ಮೊತ್ತವನ್ನು ಹೆಚ್ಚಿಸುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಮೊತ್ತವನ್ನು 5 ಲಕ್ಷ ರು.ಗೆ ಹೆಚ್ಚಿಸಿರುವುದಾಗಿ ಘೋಷಿಸಿದೆ.