ಸಾರಾಂಶ
ಮೈಕ್ರೋ ಫೈನಾನ್ಸ್ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಮೈಕ್ರೋ ಫೈನಾನ್ಸ್ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋಫೈನಾನ್ಸ್ ಭೀತಿಯಿಂದ ಜನ ಊರು ಬಿಡುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಜನರನ್ನು ಹೆದರಿಸಿ ಕಿರುಕುಳ ನೀಡುವುದನ್ನು ನಾವು ಸಹಿಸುವುದಿಲ್ಲ. ಕೇವಲ ಮೈಸೂರು ಮಾತ್ರವಲ್ಲ ಎಲ್ಲೇ ಮಾಡಿದರೂ ಅದು ತಪ್ಪೇ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ವ್ಯವಹಾರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಪ್ಪಿತಸ್ಥರ ಮೇಲೆ ಕ್ರಮ: ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ಯಾರು ಯಾರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಏನೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು. ಯಾರೇ ತಪ್ಪು ಮಾಡಿದರೂ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ನಾವೇನೂ ಮಾಡಲು ಆಗಲ್ಲ: ಗೃಹ ಸಚಿವ ಪರ
ಬೆಂಗಳೂರು: ಮೈಕ್ರೋ ಫೈನಾನ್ಸ್ ವಂಚನೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ‘ಫೈನಾನ್ಸ್ ವಂಚನೆ ತಡೆಗೆ ಹಣಕಾಸು ಇಲಾಖೆ ದಾರಿ ಹುಡುಕಬೇಕು. ನಾವು ಇದರಲ್ಲಿ ಏನೂ ಮಾಡಲು ಆಗುವುದಿಲ್ಲ’ ಎಂದಿದ್ದಾರೆ.