ಅನ್ನಭಾಗ್ಯ, ಶಕ್ತಿ ದುರ್ಬಳಕೆ ತಡೆಗೆ ಶೀಘ್ರ ಕ್ರಮ : ಡಿ.ಕೆ.ಶಿವಕುಮಾರ್

| N/A | Published : Sep 28 2025, 06:15 AM IST

Dk Shivakumar

ಸಾರಾಂಶ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

 ರಾಮನಗರ :  ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶನಿವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾದರೆ, ಶಕ್ತಿ ಯೋಜನೆಯಲ್ಲಿ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಸಾರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂತಹ ಕೆಲವು ಪ್ರಕರಣಗಳನ್ನು ಪರಿಶೀಲನೆ ಮಾಡುತ್ತಿದ್ದು, ಕೆಲವೊಂದು ಬದಲಾವಣೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಕಿತ್ತಾಕಲು ಬಿಜೆಪಿ ಷಡ್ಯಂತ್ರ:

ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನ ದಿಕ್ಕನ್ನೇ ಬದಲಾಯಿಸಿದೆ. ಒಂದೆಡೆ ಪ್ರಧಾನಿ ಮೋದಿಯವರು ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದು ಬಿಹಾರ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಹಿಳೆಯರಿಗೆ ಹಣ ಕೊಡುತ್ತಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದರೆ ಎಲ್ಲವನ್ನೂ ರದ್ದು ಮಾಡುವುದಾಗಿ ಹೇಳುತ್ತಿದ್ದಾರೆ. ಇಂಟರ್‌ನಲ್ ಮೀಟಿಂಗ್ ಮಾಡಿ ಗ್ಯಾರಂಟಿ ಕಿತ್ತಾಕಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರು ಈ ಯೋಜನೆಗಳನ್ನು ಕಿತ್ತಾಕಬೇಕು ಅಂತ ಇದ್ದಾರೆ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಇಂದಿರಾ ಗಾಂಧಿ, ದೇವರಾಜ ಅರಸು, ಎಸ್.ಎಂ.ಕೃಷ್ಣ ಅವರು ಕೊಟ್ಟ ಯೋಜನೆಗಳು ಈಗಲೂ ನಡೆಯುತ್ತಿವೆ. ಯಾವುದೇ ಯೋಜನೆ ನಿಲ್ಲಿಸಲು ಯಾರ ಕೈಯಲ್ಲೂ ಆಗುವುದಿಲ್ಲ ಎಂದು ಬಿಜೆಪಿಗೆ ಸವಾಲು ಹಾಕಿದರು.

ಗ್ಯಾರಂಟಿ ನಿಲ್ಲಿಸಲು ಬಿಜೆಪಿಗರ ಷಡ್ಯಂತ್ರ

ಪ್ರಧಾನಿ ಮೋದಿ ಅವರು ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದಾರೆ. ಬಿಹಾರ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಹಿಳೆಯರಿಗೆ ಹಣ ಕೊಡುತ್ತಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದರೆ ಎಲ್ಲವನ್ನೂ ರದ್ದು ಮಾಡುವುದಾಗಿ ಹೇಳುತ್ತಿದ್ದಾರೆ. ಗ್ಯಾರಂಟಿ ಕಿತ್ತಾಕಲು ಷಡ್ಯಂತ್ರ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

ಅನ್ನಭಾಗ್ಯ, ಶಕ್ತಿ ದುರ್ಬಳಕೆ ತಡೆಗೆ ಶೀಘ್ರ ಕ್ರಮ: ಡಿಕೆಶಿ

- ಸರ್ಕಾರಿ ನೌಕರೆಯರೂ ಫ್ರೀ ಬಸ್ಸಲ್ಲಿ ಓಡಾಡ್ತಿದ್ದಾರೆ

- ದುರುಪಯೋಗ ತಡೆಯಲು ಕೆಲ ಬದಲಾವಣೆ ತರ್‍ತೀವಿ

Read more Articles on