ಬೆಂಗಳೂರು : ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಶನಿವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ ಎಂದು ತಿಳಿದು ಬಂದಿದೆ.

ಕರಾವಳಿ ಪ್ರವಾಸೋದ್ಯಮ ಸಭೆ

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಕೂಡ ವಿಚಾರ ಅನೌಪಚಾರಿಕವಾಗಿ ಚರ್ಚೆಯಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.

ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು ಕೂಡ ಹಾಜರಿದ್ದರು

ವಿಶೇಷವಾಗಿ ಶುಕ್ರವಾರ ನಡೆದ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು ಕೂಡ ಹಾಜರಿದ್ದರು. ಮುಖ್ಯಮಂತ್ರಿ ಅವರು ರಿಷಬ್‌ ಶೆಟ್ಟಿ ಅವರನ್ನು ಬೆನ್ನು ತಟ್ಟಿರುವ ಫೋಟೋ ಕೂಡ ಬಹಿರಂಗವಾಗಿದೆ. ಆದರೆ, ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದರೂ ಸಂಪುಟ ಸಭೆಯ ಒಪ್ಪಿಗೆ ಬಳಿಕ ಅಧಿಕೃತವಾಗಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.