ಸಚಿವ ಪ್ರಿಯಾಂಕ್‌ ಖರ್ಗೆ ರಕ್ಷಣೆಗಾಗಿ ಸಕಲ ಕ್ರಮ : ಸಿಎಂ, ಪರಂ ಅಭಯ

| N/A | Published : Oct 16 2025, 05:39 AM IST

Siddaramaiah Koppal
ಸಚಿವ ಪ್ರಿಯಾಂಕ್‌ ಖರ್ಗೆ ರಕ್ಷಣೆಗಾಗಿ ಸಕಲ ಕ್ರಮ : ಸಿಎಂ, ಪರಂ ಅಭಯ
Share this Article
  • FB
  • TW
  • Linkdin
  • Email

ಸಾರಾಂಶ

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಖುದ್ದು ತಿಳಿಸಿದ್ದಾರೆ. ಅವರಿಗೆ ರಕ್ಷಣೆ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಮೈಸೂರು/ಬೆಂಗಳೂರು :  ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಖುದ್ದು ತಿಳಿಸಿದ್ದಾರೆ. ಅವರಿಗೆ ರಕ್ಷಣೆ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದಲ್ಲದೆ ಕ್ರಮ ವಹಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಕೂಡ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತ ಆಡಿಯೋವನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಇಂತಹ ಬೆದರಿಕೆಗಳಿಗೆ ಯಾರೂ ಹೆದರುವುದಿಲ್ಲ. ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್‌ ಖರ್ಗೆ ಅವರು ಹೆದರುವುದಿಲ್ಲ. ನಾನೂ ಹೆದರುವುದಿಲ್ಲ. ಪ್ರಿಯಾಂಕ್ ಖರ್ಗೆ ಅವರಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು’ ಎಂದು ತಿಳಿಸಿದರು.

ಬೆದರಿಕೆ ಹಾಕುವವರ ಮೇಲೆ ಕ್ರಮ: ಪರಮೇಶ್ವರ್

ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು, ‘ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರ್ಕಾರ ತೀರ್ಮಾನ ‌ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ. ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ’ ಎಂದು ಹೇಳಿದರು.

Read more Articles on