ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ

| N/A | Published : Aug 11 2025, 01:02 PM IST

newborn baby
ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
Share this Article
  • FB
  • TW
  • Linkdin
  • Email

ಸಾರಾಂಶ

ನೂಲು ಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬೆ ಸನ್ನಿಧಿಯಲ್ಲಿ ನಡೆದಿದೆ

ಸೊರಬ: ನೂಲು ಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬೆ ಸನ್ನಿಧಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಯುವತಿಯೊಬ್ಬರು ದೇಗುಲದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ತಕ್ಷಣ ಭಕ್ತರು ಆ್ಯಂಬುಲೆನ್ಸ್‌ ಮೂಲಕ ಸೊರಬ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆಕೆಗೆ ಮದುವೆಯಾಗಿಲ್ಲ ಎಂಬ ಮಾಹಿತಿ ತಿಳಿದ ವೈದ್ಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Read more Articles on