ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಯೋಗಿಸಲು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.
ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಯೋಗಿಸಲು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.
ನೇಮಕಾತಿ ಅಕ್ರಮ ಪ್ರಕರಣ
ಈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಶಿವಶಂಕರಪ್ಪ, ಸದಸ್ಯೆ ಬಿ.ವಿ.ಗೀತಾ ಶಿವಮೂರ್ತಿ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಬಂಧನವಾಗಿದೆ. ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರ ದುರ್ಬಳಕೆ ಮಾಡಿಕೊಂಡು ನೇಮಕಾತಿಯಲ್ಲಿ ಹಣ ಪಡೆದ ಆರೋಪಕ್ಕೆ ಈ ಮೂವರು ತುತ್ತಾಗಿದ್ದಾರೆ.
ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17(ಎ) ಅಡಿ ಕ್ರಮ
ಈ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17(ಎ) ಅಡಿ ಕ್ರಮ ಜರುಗಿಸಲು ಅನುಮತಿ ಕೋರಿ ಸರ್ಕಾರಕ್ಕೆ ಎಸ್ಐಟಿ ಪತ್ರ ಬರೆದಿತ್ತು. ಈ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ ಈಗ ಶಿವಶಂಕರಪ್ಪ, ಗೀತಾ ಹಾಗೂ ಜ್ಞಾನೇಂದ್ರ ಅವರಿಗೆ ಮತ್ತೊಂದು ಸಂಕಟ ಎದುರಾಗಿದೆ.
