ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್‌ ಅಭಿನಯದ ‘ಮಾರ್ಕ್‌’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ.

 ಸಿನಿವಾರ್ತೆ

ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್‌ ಅಭಿನಯದ ‘ಮಾರ್ಕ್‌’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ. ಈಗಾಗಲೇ ರೋಶಿನಿ ಪ್ರಕಾಶ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗ ಅರ್ಚನಾ ಕೊಟ್ಟಿಗೆ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.

ಸದ್ಯಕ್ಕೆ ಅರ್ಚನಾ ಪಾತ್ರವನ್ನು ಗುಟ್ಟಾಗಿ ಇಡಲಾಗಿದೆ. ವಿಜಯ್‌ ಕಾರ್ತಿಕೇಯ ನಿರ್ದೇಶನದ ಈ ಚಿತ್ರ ಕ್ರಿಸ್ಮಸ್‌ ಹಬ್ಬಕ್ಕೆ ತೆರೆಗೆ ಬರುತ್ತಿದೆ.