ಸಾರಾಂಶ
ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರು: ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಮಂಜುನಾಥೇಶ್ವರನ ದರ್ಶನ ಪಡೆದು ಬರಲಿದ್ದೇವೆ. ನಾವು ಬಿಜೆಪಿ ಕಾರ್ಯಕರ್ತರು ಎಂಬುದಕ್ಕಿಂತ ಹೆಚ್ಚಾಗಿ ಧರ್ಮಸ್ಥಳ ಮಂಜುನಾಥೇಶ್ವರನ ಭಕ್ತರಾಗಿ ಅಲ್ಲಿಗೆ ತೆರಳುತ್ತೇವೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ನಿಲುವು ಸ್ಪಷ್ಟವಿದೆ. ಎಸ್ಐಟಿ ತನಿಖೆ ಶೀಘ್ರದಲ್ಲಿ ಮುಗಿಯಬೇಕು. ಇದನ್ನು ಹೀಗೇ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ ಎಂದು ಹೇಳಿದರು.
ಈ ತನಿಖೆಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು, ಎಸ್‌ಡಿಪಿಐ, ಬೇರೆ ಬೇರೆ ಕುತಂತ್ರಗಳು ನಡೆಯುತ್ತಿವೆ ಎಂಬ ಚರ್ಚೆಗಳು ಜನಸಾಮಾನ್ಯರಲ್ಲಿ ನಡೆಯುತ್ತಿವೆ. ನಾವು ಮಂಜುನಾಥೇಶ್ವರನ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆಯಲು ಹೋಗಲಿದ್ದೇವೆ ಎಂದು ಸ್ಪಷ್ಟಪಡಿಸಿದರು.