ಸಾರಾಂಶ
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿರುವ ಬಿಎಚ್‌ಇಎಲ್ ಸಂಸ್ಥೆಯ ಧೋರಣೆ ಖಂಡನಾರ್ಹವಾಗಿದ್ದು, ರಾಜ್ಯ ಸರ್ಕಾರ ಸಂಸ್ಥೆಯ ಆಡಳಿತ ವರ್ಗದ ಈ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಸಿದೆ
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿರುವ ಬಿಎಚ್‌ಇಎಲ್ ಸಂಸ್ಥೆಯ ಧೋರಣೆ ಖಂಡನಾರ್ಹವಾಗಿದ್ದು, ರಾಜ್ಯ ಸರ್ಕಾರ ಸಂಸ್ಥೆಯ ಆಡಳಿತ ವರ್ಗದ ಈ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಸಿದೆ.
ಬುಧವಾರ ಬಿಎಚ್‌ಇಎಲ್ ಸಂಸ್ಥೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ನೌಕರರ ಸಂಘಟನೆಗಳಿಗೆ ಯಾವುದೇ ಷರತ್ತು ವಿಧಿಸದೆ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವುದು ನೆಲದ ಭಾಷೆಗೆ ಗೌರವ ಕೊಡುವ ವಿಷಯವಾಗಿದ್ದು, ಕೂಡಲೇ ಸಂಸ್ಥೆ ಅನುಮತಿ ನೀಡಲು ನಿರಾಕರಿಸಿದಲ್ಲಿ ರಾಜ್ಯ ಸರ್ಕಾರ ತನ್ನ ಅಧಿಕಾರ ವ್ಯಾಪ್ತಿಯನ್ನು ಸಂಸ್ಥೆಗೆ ಮನನ ಮಾಡಿಕೊಡಬೇಕು ಎಂದಿದ್ದಾರೆ.
ರಾಜ್ಯದಲ್ಲಿರುವ ಯಾವುದೇ ಸಂಸ್ಥೆ ನ.1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನಿರಾಕರಿಸಿದಲ್ಲಿ ತಾವೇ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಕ್ರಮಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಬಿಎಚ್ಇಎಲ್ ಸಂಸ್ಥೆಗೆ ಭೇಟಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಇಷ್ಟರಲ್ಲೇ ಬಿಎಚ್ಇಎಲ್ ಸಂಸ್ಥೆಗೆ ಭೇಟಿ ನೀಡಲಿದೆ. ಈ ನಿಯೋಗ ಸಂಸ್ಥೆಯ ಆಡಳಿತದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ನ್ಯೂನತೆಗಳು ಕಂಡಲ್ಲಿ ಸೂಕ್ತಕ್ರಮಕ್ಕೆ ಮುಂದಾಗಲಿದೆ ಎಂದಿದ್ದಾರೆ.
ಕರ್ನಾಟಕದ ನೆಲ-ಜಲ, ಮಾನವ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯವಹಾರ ನಡೆಸುವ ಕೇಂದ್ರೋದ್ಯಮಗಳು ಮೊದಲು ಇಲ್ಲಿನ ಭಾಷೆಗೆ ಗೌರವ ಕೊಡಬೇಕು. ಸಂಸ್ಥೆಗಳು ಒಕ್ಕೂಟ ತತ್ತ್ವವನ್ನು ಗೌರವಿಸುವಲ್ಲಿ ವಿಫಲವಾದಲ್ಲಿ ರಾಜ್ಯ ಸರ್ಕಾರ ಅಂತಹ ವೈಫಲ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
ಮೊದಲು ಇಲ್ಲಿನ ಭಾಷೆಗೆ ಗೌರವ ಕೊಡಬೇಕು
ಕರ್ನಾಟಕದ ನೆಲ-ಜಲ, ಮಾನವ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯವಹಾರ ನಡೆಸುವ ಕೇಂದ್ರೋದ್ಯಮಗಳು ಮೊದಲು ಇಲ್ಲಿನ ಭಾಷೆಗೆ ಗೌರವ ಕೊಡಬೇಕು. ಸಂಸ್ಥೆಗಳು ಒಕ್ಕೂಟ ತತ್ತ್ವ ಗೌರವಿಸುವುದು ವಿಫಲವಾದಲ್ಲಿ ರಾಜ್ಯ ಸರ್ಕಾರ ಅಂತಹ ವೈಫಲ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸುವುದು ಅನಿವಾರ್ಯ ಎಂದು ಅವರು ಎಚ್ಚರಿಸಿದ್ದಾರೆ.
;Resize=(690,390))
)
)
;Resize=(128,128))
;Resize=(128,128))
;Resize=(128,128))