ಸಾರಾಂಶ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹಿಂದಿನಿಂದಲೂ ಹೇಳುತ್ತಿದ್ದರು. ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಇದೀಗ ಕೇಂದ್ರ ಸರ್ಕಾರ ಜಾತಿ ಗಣತಿಗೆ ಮುಂದಾಗಿದೆ. ಹಾಗೆಯೇ, ರಾಹುಲ್ ಗಾಂಧಿ ಅವರು ಜಾತಿ ಗಣತಿಯನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ. ಅದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದರು.
ಸಮಾಜದ ಎಲ್ಲ ಸಮುದಾಯಗಳಿಗೆ ನ್ಯಾಯ ಸಿಗಬೇಕೆಂದರೆ ಜನಸಂಖ್ಯೆ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯ ನೀಡಬೇಕು. ಇದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ, ಬೇಡಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು.