ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ

| N/A | Published : May 16 2025, 10:08 AM IST

Chaithra Kundapura
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
Share this Article
  • FB
  • TW
  • Linkdin
  • Email

ಸಾರಾಂಶ

ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ಆಕೆಯ ತಂದೆ ಬಾಲಕೃಷ್ಣ ನಾಯ್ಕ್‌, ಮಗಳ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  ಉಡುಪಿ : ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ಆಕೆಯ ತಂದೆ ಬಾಲಕೃಷ್ಣ ನಾಯ್ಕ್‌, ಮಗಳ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಆಕೆ ನನ್ನನ್ನು ಕರೆದಿಲ್ಲ, ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ ಎಂದು ಹೇಳಿದ್ದಾರೆ.

ಚೈತ್ರಾ, ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ, ನನ್ನನ್ನು ಜಗುಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ ಎಂದು ಅವರು ನೋವು ತೋಡಿಕೊಂಡಿದ್ದಾರೆ. ಚೈತ್ರಾ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾಳ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ ಎಂದು ಆರೋಪಿಸಿದ್ದಾರೆ.

ನನ್ನ ಪತಿ ಮಾನಸಿಕ ಅಸ್ವಸ್ಥ:

ಪತಿ ಮಾತಿಗೆ ತಿರುಗೇಟು ನೀಡಿರುವ ಚೈತ್ರಾ ಕುಂದಾಪುರ ತಾಯಿ ರೋಹಿಣಿ, ‘ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ. ಅವರಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ರಾತೋರಾತ್ರಿ ಮನೆ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಏನೇನೋ ಮಾತನಾಡುತ್ತಾರೆ’ ಎಂದಿದ್ದಾರೆ.

ನನ್ನ ಪತಿ ಕುಟುಂಬದ ಜವಾಬ್ದಾರಿ ಇಲ್ಲದ ವ್ಯಕ್ತಿ. ಮನೆಯ ಯಾವ ಕಷ್ಟಕ್ಕೂ ಅವರು ಸ್ಪಂದಿಸಿದವರಲ್ಲ. ಯಾವ ಮನೆಯ ಜವಾಬ್ದಾರಿಯನ್ನೂ ಅವರು ತೆಗೆದುಕೊಂಡವರಲ್ಲ. ಕೆಲಸ ಮಾಡುತ್ತೇನೆ ಎಂದು ಎಲ್ಲೆಲ್ಲೋ ಹೋಗುತ್ತಾರೆ. ದುಡಿದ ಹಣವನ್ನು ದೊಡ್ಡ ಮಗಳಿಗೆ ಕೊಡುತ್ತಾರೆ. ನನ್ನ ದೊಡ್ಡ ಮಗಳು ಆಸ್ತಿಗೋಸ್ಕರ ತಂದೆಗೆ ಈ ರೀತಿ ಮಾತನಾಡಲು ಹೇಳಿಕೊಟ್ಟಿದ್ದಾಳೆ ಎಂದು ಆರೋಪಿಸಿದ್ದಾರೆ.