ಸಕ್ಕರೆ, ಕೊಬ್ಬಿನಂಶ ಹೆಚ್ಚಿರುವ ಕಾರಣ ಶಾಲಾ ಮಕ್ಕಳಿಗೆ ಚಿಕ್ಕಿ ಬ್ಯಾನ್‌ - ಅಧಿಕಾರಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ದೇಶನ

| N/A | Published : Feb 18 2025, 09:26 AM IST

Peanuts Snacks
ಸಕ್ಕರೆ, ಕೊಬ್ಬಿನಂಶ ಹೆಚ್ಚಿರುವ ಕಾರಣ ಶಾಲಾ ಮಕ್ಕಳಿಗೆ ಚಿಕ್ಕಿ ಬ್ಯಾನ್‌ - ಅಧಿಕಾರಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ದೇಶನ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

  ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪ್ರಸ್ತುತ ಮೊಟ್ಟೆ ಸೇವಿಸದ ಮಕ್ಕಳಿಗೆ ಅದರ ಬದಲಾಗಿ ಚಿಕ್ಕಿ ನೀಡಲಾಗುತ್ತಿದೆ. ಆದರೆ, ಶೇಂಗಾ ಚಿಕ್ಕಿಯಲ್ಲಿ ಕೊಬ್ಬಿನ ಅಂಶ ಹೆಚ್ಚು ಮತ್ತು ಸಕ್ಕರೆ ಅಂಶ ಅಧಿಕ. ಜತೆಗೆ, ಸರಿಯಾದ ಕ್ರಮದಲ್ಲಿ ಸಂಗ್ರಹಿಸದಿದ್ದಾಗ ಸೇವನೆಗೆ ಯೋಗ್ಯವಿಲ್ಲದಂತಾಗಿ ಮಕ್ಕಳ ಆರೋಗ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಟ್ಟೆ ಬದಲಾಗಿ ಬಾಳೆಹಣ್ಣನ್ನು ಮಾತ್ರ ವಿತರಿಸಲು ಕ್ರಮ ವಹಿಸುವಂತೆ ಇಲಾಖೆಯ ಕಲಬುರಗಿ ಅಪರ ಆಯುಕ್ತರು ಕೋರಿದ್ದರು. ಇದೇ ರೀತಿಯ ಆಗ್ರಹ ಇನ್ನೂ ಕೆಲ ಜಿಲ್ಲೆಗಳಿಂದಲೂ ಬಂದಿತ್ತು.

ಈ ಕಾರಣದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇನ್ನು ಮುಂದೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಬೇಕು. ಚಿಕ್ಕಿ ನೀಡುವುದನ್ನು ಸ್ಥಗಿತಗೊಳಿಸಬೇಕೆಂದು ಸೂಚಿಸಿದೆ. ಈ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಇಲಾಖಾ ಆಯುಕ್ತರಿಗೆ ನಿರ್ದೇಶನ ನೀಡಿದೆ.