ಹಾವೇರಿ : ಮಳೆ ಕೊರತೆಯ ಹಿನ್ನೆಲೆಯಲ್ಲಿ ರೈತರ ನೆರವಿಗೆ ಧಾವಿಸಿರುವ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಜಿಲ್ಲಾದ್ಯಂತ ಮೋಡ ಬಿತ್ತನೆಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜು.7ರಿಂದ ಸತತ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸುವುದಾಗಿ ತಿಳಿಸಿದ್ದಾರೆ.
ಮೋಡ ಬಿತ್ತನೆಗೆ ಕೇಂದ್ರ ಸರ್ಕಾರದಿಂದ ಪರವಾನಗಿ
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆಗೆ ಕೇಂದ್ರ ಸರ್ಕಾರದಿಂದ ಪರವಾನಗಿ ಕೇಳಲಾಗಿತ್ತು. ಅವಕಾಶ ನೀಡಿರುವ ಮಾಹಿತಿ ಬಂದಿದೆ. ರಾಜ್ಯಾದ್ಯಂತ ಸರ್ಕಾರ ಟೆಂಡರ್ ಕರೆಯಬೇಕಿದೆ. ಅದಕ್ಕೆ ಸಮಯ ತಗಲುವುದರಿಂದ ಜಿಲ್ಲೆಯ 6 ಶಾಸಕರೇ ಸೇರಿ 8 ತಾಲೂಕುಗಳಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ಮಾಡುತ್ತೇವೆ. ಒಂದು ತಾಸಿನ ಕಾರ್ಯಾಚರಣೆಗೆ ₹15 ಲಕ್ಷ ವೆಚ್ಚವಾಗಲಿದೆ. ಈ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದು ಹೇಳಿದರು.
ಅಮೆರಿಕದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ಅತ್ಯಾಧುನಿಕ ವಿಮಾನ
ಮೋಡ ಬಿತ್ತನೆ ಕಾರ್ಯಕ್ಕಾಗಿಯೇ ಅಮೆರಿಕದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ಅತ್ಯಾಧುನಿಕ ವಿಮಾನ ಬಳಸುತ್ತಿದ್ದು ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದೆ. ಈ ಕಾರ್ಯಾಚರಣೆಗೆ ಈಗಾಗಲೇ ಪೈಲಟ್‌ಗಳಿಗೆ ವಿಶೇಷ ತರಬೇತಿ ಸಹ ನೀಡಲಾಗಿದೆ ಎಂದರು.
