ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ

| N/A | Published : Aug 02 2025, 11:57 AM IST

Karnataka CM Siddaramaiah (Photo/ANI)
ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಕಡಿಮೆಯಿಲ್ಲ  - ಮುಖ್ಯಮಂತ್ರಿ ಸಿದ್ದರಾಮಯ್ಯ 

 ಬೆಂಗಳೂರು :  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಕಡಿಮೆಯಿಲ್ಲ. ಕೃತ್ಯ ಎಸಗಿರುವ ದುರುಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

Read more Articles on