ಮೈಸೂರು/ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಕಾಂಪ್ರಮೈಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಕಾಂಪ್ರಮೈಸ್ ಪಾಲಿಟಿಕ್ಸ್ ಈಗ ಅನಿವಾರ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ಟೈಮ್‌ನಲ್ಲೂ ಒಂದೇ ರೀತಿ ಬಿಗಿಯಾಗಿ ರಾಜಕಾರಣ ಮಾಡಲು ಆಗಲ್ಲ. ಕಾಂಪ್ರಮೈಸ್ ಅನಿವಾರ್ಯ ಎಂದರು.

ಬೆಂಬಲಿಗರನ್ನು ಕಾಪಾಡುವ ವಿಚಾರದಲ್ಲಿ ಸಿದ್ದರಾಮಯ್ಯ ವೀಕ್ ಆಗಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಹಾಗೆ ಅನ್ನಿಸುವುದಿಲ್ಲ, ರಾಜಕೀಯದಲ್ಲಿ ಕೆಲವೊಮ್ಮೆ ವೀಕ್ ಆಗಿರಬೇಕಾಗುತ್ತದೆ, ಮತ್ತೆ ಕೆಲವೊಮ್ಮೆ ಸ್ಟ್ರಾಂಗ್ ಕೂಡ ಆಗಬೇಕಾಗುತ್ತದೆ. ಎಲ್ಲವೂ ಸಮಯ-ಸಂದರ್ಭಕ್ಕೆ ತಕ್ಕಂತೆ ಇರಬೇಕು ಎಂದರು.


ಕಾಂಗ್ರೆಸ್‌ ವಿರುದ್ಧ ಅಲ್ಪಸಂಖ್ಯಾತರು ಮುನಿಸಿಕೊಂಡಿರುವುದರ ಬಗ್ಗೆ ಮಾತನಾಡಿ, ಇದನ್ನು ಸರಿಪಡಿಸುತ್ತೇವೆ, ಇದು ರಾಜ್ಯದ ಸಮಸ್ಯೆಯಲ್ಲ, ದಾವಣಗೆರೆಯಲ್ಲಿ ಮಾತ್ರ ಆಗಿರುವುದು ಎಂದರು.

- ಇಷ್ಟು ಅಸಹಾಯಕತೆ ನೋಡಿಲ್ಲ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆ ನೀಡಿದ್ದಾರೆ. ‘ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ ಶಕ್ತಿ ಹೊಂದಿರುವ ಸಿಎಂ ಇಷ್ಟೊಂದು ಅಸಹಾಯಕರಾಗಿರುವುದನ್ನು ಎಂದೂ ನೋಡಿರಲಿಲ್ಲ. ಈಗ ನೋಡಿದರೆ ಅವರ ಮೇಲೆ ಯಾರಾದರೂ ಮಾಟ-ಮಂತ್ರ ಮಾಡಿದ್ದಾರೆಯೇ ಎನಿಸುತ್ತದೆ. ಆ ಬಗ್ಗೆ ನಾನು ವಿಚಾರ ಮಾಡುತ್ತಿದ್ದು, ತನಿಖೆ --

ಸಿದ್ದು ಸೈಲೆಂಟ್‌ ಆಗಿರಬಹುದು, ಎಂದಿಗೂ ಅವ್ರು ಟಗರು: ಜಮೀರ್‌ 

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್‌ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೇಲೆ ಕ್ರಮವಾಗುತ್ತಿದ್ದರೂ ಅಸಹಾಯಕರಾಗಿದ್ದಾರೆ ಎಂಬದರ ಕುರಿತು ಪ್ರತಿಕ್ರಿಯೆ ನೀಡಿದರು.

‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್‌ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು.