ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ಕೇಂದ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಪ್ರಧಾನಿಯವರಿಗೆ ಯೋಜನೆಯ ಅಗತ್ಯ ವಿವರಿಸಿದ್ದೇನೆ. ಈ ಸಂಬಂಧ ಸರ್ವಪಕ್ಷ ನಿಯೋಗ ಕರೆತರುವುದಾಗಿಯೂ ತಿಳಿಸಿದ್ದು, ಅವರು ಒಪ್ಪಿದ್ದಾರೆ

ಬೆಂಗಳೂರು : ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ಕೇಂದ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಪ್ರಧಾನಿಯವರಿಗೆ ಯೋಜನೆಯ ಅಗತ್ಯ ವಿವರಿಸಿದ್ದೇನೆ. ಈ ಸಂಬಂಧ ಸರ್ವಪಕ್ಷ ನಿಯೋಗ ಕರೆತರುವುದಾಗಿಯೂ ತಿಳಿಸಿದ್ದು, ಅವರು ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬೆಂಗಳೂರಿನಲ್ಲಿ ರಸ್ತೆಗಳ ಪ್ರಮಾಣ ಕೇವಲ ಶೇ.8ರಷ್ಟಿದೆ

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಬೆಂಗಳೂರಿನಲ್ಲಿ ರಸ್ತೆಗಳ ಪ್ರಮಾಣ ಕೇವಲ ಶೇ.8ರಷ್ಟಿದೆ. ಇತರ ನಗರಗಳಲ್ಲಿ ಇದು ಶೇ.18ರಿಂದ 20ರಷ್ಟಿದೆ. ಬೆಂಗಳೂರಿನಲ್ಲಿ ಪ್ರತಿ ಚದರ ಅಡಿಗೆ ಸುಮಾರು 50 ಸಾವಿರ ರು. ಪರಿಹಾರ ನೀಡಬೇಕಾದ ಪರಿಸ್ಥಿತಿ ಇದೆ. ಇದನ್ನು ಸರ್ಕಾರವೊಂದರಿಂದಲೇ ಭರಿಸುವುದು ಕಷ್ಟ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ವೆಚ್ಚ ಹಂಚಿಕೊಳ್ಳುವ ಮೂಲಕ ಡಬಲ್ ಡೆಕ್ಕರ್ ಯೋಜನೆ ಜಾರಿಗೊಳಿಸಬೇಕಿದೆ ಎಂದು ಪ್ರಧಾನಿ ಅವರಿಗೆ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.

ಸರ್ವಪಕ್ಷ ನಿಯೋಗ

ಈ ಸಂಬಂಧ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಬರುವುದಾಗಿಯೂ ತಿಳಿಸಿದ್ದೇನೆ. ಅದಕ್ಕೆ ಅವರು ಒಪ್ಪಿದ್ದಾರೆ. ನಾನು ರಾಜ್ಯದ ಪ್ರತಿನಿಧಿಯಾಗಿ ರಾಜ್ಯದ ಹಿತಕ್ಕಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ಯಾರು ಏನು ಬೇಕಾದರೂ ಊಹಿಸಿಕೊಳ್ಳಲಿ ಎಂದರು.