ರಾಜ್ಯದಲ್ಲಿ ನೀತಿ ಸಂಹಿತೆ ತುಸು ಸಡಿಲ: ಚಲುವರಾಯಸ್ವಾಮಿ

| Published : May 18 2024, 10:41 AM IST

N. Chaluvarayaswamy
ರಾಜ್ಯದಲ್ಲಿ ನೀತಿ ಸಂಹಿತೆ ತುಸು ಸಡಿಲ: ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಆಯೋಗವು ರಾಜ್ಯದಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ತುಸು ಸಡಿಲಗೊಳಿಸಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು : ಚುನಾವಣಾ ಆಯೋಗವು ರಾಜ್ಯದಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ತುಸು ಸಡಿಲಗೊಳಿಸಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಬುಧವಾರ ಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್‌ ಕರೆಯಲು ಹಾಗೂ ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಜತೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅವಕಾಶ ನೀಡಲಾಗಿದೆ. ಆದರೆ ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀತಿ ಸಂಹಿತೆ ಅಡಿ ಅವಕಾಶವಿರುವ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಬೇಕು. ಜೂನ್‌ ವೇಳೆಗೆ ಟೆಂಡರ್‌ ಪ್ರಕ್ರಿಯೆ ಮುಗಿಸಬೇಕು ಎಂದು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 7ರಂದೇ ರಾಜ್ಯದಲ್ಲಿ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆ ಮುಂದುವರಿದಿದೆ. ಸಂಹಿತೆ ಸಂಪೂರ್ಣ ತೆರವಾಗಲು ಜೂ.4ರ ಫಲಿತಾಂಶದ ದಿನದವರೆಗೆ ರಾಜ್ಯ ಸರ್ಕಾರಗಳು ಕಾಯಬೇಕಾಗಿದೆ.