ಸಾರಾಂಶ
ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ.
ಮುಂದಿನ ಮೂರು ದಿನ ಕನಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಇನ್ನೂ 2 ರಿಂದ 4 ಡಿ.ಸೆ. ಇಳಿಕೆಯಾಗಲಿದೆ. ಮಂಜು ಮುಸುಕಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಭಾರತ ಗಡಗಡ - ವಿಮಾನ, ರೈಲು ಸಂಚಾರ ವ್ಯತ್ಯಯ
ನವದೆಹಲಿ: ದೆಹಲಿ, ಜಾರ್ಖಂಡ್, ಜಮ್ಮು-ಕಾಶ್ಮೀರ ಸೇರಿದಂತೆ ಉತ್ತರದ ಹಲವು ರಾಜ್ಯಗಳು ಚಳಿಗೆ ತತ್ತರಿಸಿ ಹೋಗಿವೆ. ಹವಾಮಾನ ವೈಪರೀತ್ಯದಿಂದಾಗಿ ಹಲವು ರಾಜ್ಯಗಳಲ್ಲಿ ನೂರಾರು ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಕಾಶ್ಮೀರದಲ್ಲಿ ತಾಪಮಾನ ಮೈನಸ್ 8.1 ಡಿಗ್ರಿಗೆ ಇಳಿಕೆಯಾಗಿದೆ.