ಸಾರಾಂಶ
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಆಗ್ರಹಿಸಿದ್ದಾರೆ.
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಆಗ್ರಹಿಸಿದ್ದಾರೆ.
ಈ ಕುರಿತು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುರಂತದ ಬಗ್ಗೆ ಸರ್ಕಾರ ಕೂಲಂಕಷ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಗೆ ಕಾರಣವಾದ ಲೋಪಗಳನ್ನು ಕೂಲಂಕಷವಾಗಿ ತನಿಖೆ ಮಾಡಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.
;Resize=(690,390))
)
)

;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))