ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸ ಎದುರು ಕಬ್ಬು ಬೆಳೆಗಾರರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಹೈಕೋರ್ಟ್‌ ತಡೆ ನೀಡಿದೆ. ಜನವಸತಿ ಪ್ರದೇಶದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಡಿ.

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸ ಎದುರು ಕಬ್ಬು ಬೆಳೆಗಾರರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಹೈಕೋರ್ಟ್‌ ತಡೆ ನೀಡಿದೆ. ಜನವಸತಿ ಪ್ರದೇಶದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಡಿ. ಬೇರೆಡೆ ನಿಗದಿತ ಜಾಗ ಗುರುತಿಸಿ ಅಲ್ಲಿ ಹೋರಾಟಕ್ಕೆ ಅವಕಾಶ ಮಾಡಿಕೊಡಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಕಬ್ಬು ಬೆಳೆಗಾರರ ಹೋರಾಟಕ್ಕೆ ಜಾಗ ಎಲ್ಲಿ ಎಂಬ ಪ್ರಶ್ನೆ

ಇದರಿಂದಾಗಿ ಬೆಳಗಾವಿಯಿಂದ ಹುಬ್ಬಳ್ಳಿ ಚಲೋ ನಡೆಸುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಜಾಗ ಎಲ್ಲಿ ಎಂಬ ಪ್ರಶ್ನೆ ಇದೀಗ ಉದ್ಭವವಾದಂತಾಗಿದೆ.

ಜೋಶಿ ಮನೆ ಎದುರಿಗೆ ಹೋರಾಟ ನಡೆಸುವುದಾಗಿ ಘೋಷಣೆ ಮಾಡಿದ್ದ ಕಬ್ಬು ಬೆಳೆಗಾರರು

ಜೋಶಿ ಮನೆ ಎದುರಿಗೆ ಹೋರಾಟ ನಡೆಸುವುದಾಗಿ ಘೋಷಣೆ ಮಾಡಿದ್ದ ಕಬ್ಬು ಬೆಳೆಗಾರರು, ಬೆಳಗಾವಿಯಿಂದ ಹುಬ್ಬಳ್ಳಿ ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಜೋಶಿ ನಿವಾಸ ಇರುವ ಮಯೂರಿ ಎಸ್ಟೇಟ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಬ್ಯಾರಿಕೇಡ್‌ ಅಳವಡಿಸಿ ಸೀಲ್‌ಡೌನ್‌ ಮಾಡಲಾಗಿದೆ. ಇದರಿಂದ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗಿದೆ. ಹೀಗಾಗಿ ನಿವಾಸಿಗಳ ಅರ್ಜಿ ಮೇರೆಗೆ ಹೈಕೋರ್ಟ್‌, ಅನ್ಯ ಸ್ಥಳದಲ್ಲಿ ಪ್ರತಿಭಟನೆಗೆ ಸೂಚಿಸಿದೆ.