ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನ.3ರಿಂದ 5ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೂರು ದಿನ ಕಾಲ ರಾಜ್ಯದ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ. ಮತ್ತೆ ಕೆಲವೆಡೆ ಉತ್ತಮ ಬೀಳಲಿದೆ.
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ನ.3ರಿಂದ 5ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೂರು ದಿನ ಕಾಲ ರಾಜ್ಯದ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ
ಮೂರು ದಿನ ಕಾಲ ರಾಜ್ಯದ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ. ಮತ್ತೆ ಕೆಲವೆಡೆ ಉತ್ತಮ ಬೀಳಲಿದೆ. ನ.3ರಂದು ವಿಜಯಪುರ, ಬಾಗಲಕೋಟೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನ.4ರಂದು ಇಡೀ ರಾಜ್ಯದಲ್ಲಿ ಹಾಗೂ ನ.5ರಂದು ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯಕೆ ಇದೆ. ತಾಪಮಾನದಲ್ಲಿ ಅಲ್ಪ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಧಾರವಾಡ, ಬೆಳಗಾವಿ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗಿದೆ.
ರಾಯಚೂರಲ್ಲಿ ಸಿಡಿಲಿಗೆ ರೈತ ಬಲಿ:
ರಾಯಚೂರು ಮತ್ತು ಮಂಗಳೂರಿನಲ್ಲಿ ಸೋಮವಾರ ಗುಡುಗು ಸಹಿತ ಮಳೆ ಸುರಿಯಿತು. ಈ ವೇಳೆ ಸಿಡಿಲು ಬಡಿದು ರೈತನೊರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಪ್ರಭಣ್ಣ (55) ಜಮೀನಿನಲ್ಲಿ ಸಾವನ್ನಪ್ಪಿದ್ದಾನೆ. ಆತನ ಪತ್ನಿ ಮರಿಯಮ್ಮ (50) ಕುಟುಂಬಸ್ಥರಾದ ಲತಮ್ಮ (36) ಜೋತೆಮ್ಮ (42) ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

