ಶೇ.40ರಷ್ಟು ಕಮಿಷನ್‌ ಆರೋಪಕ್ಕೆ ಕೈ ಸಾಕ್ಷ್ಯ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

| Published : Jan 07 2025, 10:08 AM IST

Basavaraj Bommai

ಸಾರಾಂಶ

 ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಚು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಸಿದ್ದಾರೆ.

 ಹುಬ್ಬಳ್ಳಿ :  ರಾಜ್ಯ ಸರ್ಕಾರ ಕಾಮಗಾರಿಗಳಲ್ಲಿ ಶೇ 60 ಪರ್ಸೆಂಟ್ ಕಮಿಷನ್‌ ಪಡೆಯುತ್ತಿದೆ ಎಂದು ಆರೋಪಕ್ಕೆ ಸಾಕ್ಷ್ಯ ನೀಡಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಚು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಸಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಆಗ ಮಾಡಿದ ಆರೋಪದ ಬಗ್ಗೆ ಈವರೆಗೂ ದಾಖಲೆ ಕೊಡಲು ಸಾಧ್ಯವಾಗಿಲ್ಲ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದು ಗೊತ್ತು. ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಜನಸಾಮಾನ್ಯರು, ಗುತ್ತಿಗೆದಾರರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ. ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕೇವಲ ಆರೋಪ ಮಾಡುವುದಲ್ಲ. ಸಾಕ್ಷ್ಯಾಧಾರ, ದಾಖಲೆ ಸಮೇತ ಆರೋಪ ಮಾಡಿ, ಅದನ್ನು ಸಾಬೀತುಪಡಿಸಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬಹಿರಂಗವಾಗಿ ಸವಾಲು ಹಾಕಿದ್ದರು.