ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರು-ಕಲಬುರಗಿಗೆ 31ಕ್ಕೆ ಟ್ರಿಪ್‌ ವಿಶೇಷ ರೈಲು ಸಂಚಾರ

| Published : Oct 24 2024, 08:01 AM IST

Train

ಸಾರಾಂಶ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು((06217) ಅ.31ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 9.15ಕ್ಕೆ ಹೊರಟು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಹಿಂದಿರುಗುವ ರೈಲು (06218) ನ.1ರಂದು ಕಲಬುರಗಿಯಿಂದ ಬೆಳಗ್ಗೆ 9.35ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಯಶವಂತಪುರದಿಂದ ಅ. 29 ರಂದು ಸಂಜೆ 6:30ಕ್ಕೆ ಹೊರಡುವ ಯಶವಂತಪುರ-ಕೊಟ್ಟಾಯಂ ವಿಶೇಷ ಎಕ್ಸ್ ಪ್ರೆಸ್ ರೈಲು (06215) ಮರುದಿನ ಬೆಳಗ್ಗೆ 8:10ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ. ಹಿಂದಿರುಗುವ ರೈಲು (06216) ಅ.30ರಂದು ಬೆಳಗ್ಗೆ 11.10ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅ.31ರಂದು ತಡರಾತ್ರಿ 1.15ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ವೈಟ್‌ಫೀಲ್ಡ್, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ ಮತ್ತು ಎರ್ನಾಕುಲಂ ಟೌನ್ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.