ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!

| N/A | Published : Nov 01 2025, 11:20 AM IST

DK Shivakumar
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!
Share this Article
  • FB
  • TW
  • Linkdin
  • Email

ಸಾರಾಂಶ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮೇಲಿನ ಅಭಿಮಾನ ಪ್ರದರ್ಶಿಸಿರುವ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್‌ ಅವರು, ತಮ್ಮ ಪುತ್ರನಿಗೆ ‘ಶಿವಕುಮಾರ್‌’ ಎಂದು ಡಿ.ಕೆ.ಶಿವಕುಮಾರ್‌ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ.

  ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮೇಲಿನ ಅಭಿಮಾನ ಪ್ರದರ್ಶಿಸಿರುವ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್‌ ಅವರು, ತಮ್ಮ ಪುತ್ರನಿಗೆ ‘ಶಿವಕುಮಾರ್‌’ ಎಂದು ಡಿ.ಕೆ.ಶಿವಕುಮಾರ್‌ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ.

ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್‌

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್‌, ನನ್ನ ಗೃಹ ಕಚೇರಿಯಲ್ಲಿ ಶುಕ್ರವಾರ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್‌ ಅವರ ಮಗನಿಗೆ ಶಿವಕುಮಾರ್‌ ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ನಡೆಗೆ ನಾನು ಧನ್ಯ. 

ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ

ಮುಂದಿನ ದಿನಗಳಲ್ಲಿ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ. ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭ ಹಾರೈಸಿದ್ದೇನೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಈ ‘ಶಿವಕುಮಾರ’ ಕರುನಾಡ ಬೆಳಗುವ ಕುವರನಾಗಲಿ ಎಂದು ಹಾರೈಸುವೆ ಎಂದಿದ್ದಾರೆ.

Read more Articles on