ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ

| N/A | Published : Nov 21 2025, 07:06 AM IST

DK Shivakumar

ಸಾರಾಂಶ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.  

  ಬೆಂಗಳೂರು :  ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೆ ಯಾರು ದೆಹಲಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ ಎಂದಿದ್ದಾರೆ.

ಅಧಿಕಾರದ ಭವಿಷ್ಯ ಉತ್ತಮವಾಗಿದೆ

ಸದಾಶಿವನಗರದ ತಮ್ಮ ನಿವಾಸದ ಬಳಿ ತಮ್ಮ ಅಧಿಕಾರದ ಭವಿಷ್ಯ ಉತ್ತಮವಾಗಿದೆ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಪ್ರಶ್ನಿಸಿಲ್ಲ. ಅವರು ಮುಖ್ಯಮಂತ್ರಿಯಾಗಿ ಪಕ್ಷ ಜವಾಬ್ದಾರಿ ನೀಡಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ನನಗೆ ಆರೋಗ್ಯದಲ್ಲಿ ಸರಿಯಿಲ್ಲ. ಹೀಗಾಗಿ ನಾನು ವಿಶ್ರಾಂತಿಯಲ್ಲಿದ್ದೇನೆ

ಶಾಸಕರ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಉತ್ತರಿಸಿ, ನನಗೆ ಆರೋಗ್ಯದಲ್ಲಿ ಸರಿಯಿಲ್ಲ. ಹೀಗಾಗಿ ನಾನು ವಿಶ್ರಾಂತಿಯಲ್ಲಿದ್ದೇನೆ. ಯಾರು ದೆಹಲಿಗೆ ಹೋಗಿದ್ದಾರೆ, ಏತಕ್ಕಾಗಿ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್‌ ಸದಸ್ಯರೊಂದಿಗಿನ ಸಭೆಯ ಕುರಿತು ಪ್ರತಿಕ್ರಿಯಿಸಿ, ವಿಧಾನಪರಿಷತ್‌ ಸಭಾಪತಿ ಮತ್ತು ಉಪಸಭಾಪತಿ ಕುರಿತು ಚರ್ಚಿಸಲು ಸದಸ್ಯರು ಬಂದಿದ್ದರು. ನಮ್ಮ ಪಕ್ಷದವರನ್ನು ಸಭಾಪತಿ ಮತ್ತು ಉಪಾಸಭಾಪತಿಯನ್ನಾಗಿ ಮಾಡುವಂತೆ ಕೋರಿದ್ದಾರೆ. ಅದರ ಬಗ್ಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.

Read more Articles on