ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ ರಾಜ್ಯ ಸರ್ಕಾರವು ಕೇಂದ್ರ ಜಲ ಆಯೋಗದ ಎದುರು ಪರಿಷ್ಕೃತ ಡಿಪಿಆರ್ ಸಲ್ಲಿಸಲು ಸಿದ್ಧತೆ ನಡೆಸಿದೆ.
ಬೆಂಗಳೂರು : ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೆ ರಾಜ್ಯ ಸರ್ಕಾರವು ಕೇಂದ್ರ ಜಲ ಆಯೋಗದ ಎದುರು ಪರಿಷ್ಕೃತ ಡಿಪಿಆರ್ ಸಲ್ಲಿಸಲು ಸಿದ್ಧತೆ ನಡೆಸಿದೆ.
ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಕರ್ನಾಟಕ ತಮ್ಮ ಜಾಗದಲ್ಲಿ ತಾವು ಯೋಜನೆ ಮಾಡಿಕೊಳ್ಳುವುದಕ್ಕೆ ತಮಿಳುನಾಡು ಆಕ್ಷೇಪಣೆ ಸಲ್ಲಿಸಲು ಬರುವುದಿಲ್ಲ. ನಿಮ್ಮ ಪಾಲಿನ ನೀರು ಅವರು ಬಿಡುತ್ತಿದ್ದಾರೆ. ಇದರ ಬಗ್ಗೆ ಕೇಂದ್ರ ಜಲ ಆಯೋಗ ನಿರ್ಧಾರ ಮಾಡಬೇಕು ಎಂದು ಹೇಳಿದೆ.
ರಾಜ್ಯದ ಪಾಲಿಗೆ ದೊಡ್ಡ ಗೆಲುವಾಗಿದೆ
ಇದು ರಾಜ್ಯದ ಪಾಲಿಗೆ ದೊಡ್ಡ ಗೆಲುವಾಗಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಈ ಯೋಜನೆಗೆ ಇದ್ದ ಪ್ರಮುಖ ಅಡಚಣೆ ನಿವಾರಣೆಯಾದಂತಾಗಿದೆ. ಹೀಗಾಗಿ 10-15 ದಿನಗಳಲ್ಲಿ ಮತ್ತೆ ಪರಿಷ್ಕೃತ ಡಿಪಿಆರ್ ಆಯೋಗದ ಎದುರು ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

