ಬೆಂಗಳೂರು : ರಾಜ್ಯದ ಪ್ರಸ್ತುತ 112 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಇದ್ದು, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 669 ಹಳ್ಳಿಗಳಿಗೆ ಬಾಡಿಗೆ ಪಡೆದಿರುವ 789 ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಕಂದಾಯ ಸಚಿವ ಡಾ। ಜಿ.ಪರಮೇಶ್ವರ್‌ ಅವರಿಗೆ ಮಾಹಿತಿ ನೀಡಿದ್ದಾರೆ.

ಸೂಪರ್ ಎಲ್ ನಿನೋ’ ಪ್ರಭಾವ

‘ಸೂಪರ್ ಎಲ್ ನಿನೋ’ ಪ್ರಭಾವದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಬರ ಹಾಗೂ ಪ್ರಕೃತಿ ವಿಕೋಪದ ಪರಿಣಾಮಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ತಕ್ಷಣವೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

ಸಚಿವರಿಗೆ ಜಿಲ್ಲೆಗಳ ಪ್ರಕೃತಿ ವಿಕೋಪ ಉಸ್ತುವಾರಿ

ಬೆಂಗಳೂರು: ಪ್ರಕೃತಿ ವಿಕೋಪದ ಮೇಲುಸ್ತುವಾರಿ ವಹಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ 12 ಮಂದಿ ಸಚಿವರಿಗೆ ವಿವಿಧ ಜಿಲ್ಲೆಗಳ ಪ್ರಕೃತಿ ವಿಕೋಪದ ಮೇಲುಸ್ತುವಾರಿ ಹೊಣೆ ನೀಡಿ ಸರ್ಕಾರ ಆದೇಶ ಮಾಡಿದೆ. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗದ ಹಿನ್ನೆಲೆಯಲ್ಲಿ ಹಾಲಿ ಉಪಮುಖ್ಯಮಂತ್ರಿ ಸೇರಿ ಇರುವ 13 ಮಂದಿ ಸಚಿವರಿಗೆ 32 ಜಿಲ್ಲೆಗಳ ಹೊಣೆ ವಹಿಸಲಾಗಿದೆ