ಸಾರಾಂಶ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.
ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.
ಸಹಾಯಧನದ ಹಲವು ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಆಗದ ಕಾರಣ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿಲ್ಲ. ಇಂತವರ ಪಟ್ಟಿಯನ್ನು https://karbwwb.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಫಲಾನುಭವಿಗಳು ಅ.15ರೊಳಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬೇಕು.
ಅದೇ ರೀತಿ 2022-23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಮಕ್ಕಳ ಗುರುತಿನ ಚೀಟಿ (SATS ID/STUDENT ID) ನಮೂದಾಗದ ಕಾರಣ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಆಗುತ್ತಿಲ್ಲ. ಸಂಬಂಧಪಟ್ಟವರು ಅ.15ರೊಳಗೆ ಕಾರ್ಮಿಕ ನಿರೀಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ತೆರಳಿ ಶೈಕ್ಷಣಿಕ ಧನಸಹಾಯ ಕೋರಲಾದ ಮಕ್ಕಳ ಗುರುತಿನ ಚೀಟಿಯನ್ನು ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.