ಶಿವಾಜಿ ನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಮೂರ್ಚೆ ರೋಗದಿಂದ ಬಳಲಿದ ಹಿರಿಯ ನಾಗರಿಕರಿಗೆ ವೈದ್ಯಕೀಯ ನೆರವು ನೀಡದ ಘಟನೆ ಸಂಬಂಧ ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಬೆಂಗಳೂರು : ಶಿವಾಜಿನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಮೂರ್ಚೆ ರೋಗದಿಂದ ಬಳಲಿದ ಹಿರಿಯ ನಾಗರಿಕರಿಗೆ ವೈದ್ಯಕೀಯ ನೆರವು ನೀಡದ ಘಟನೆ ಸಂಬಂಧ ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಶಿವಾಜಿನಗರಕ್ಕೆ ಟಿಕೆಟ್‌ ಪಡೆದಿದ್ದರು

ಕಳೆದ ಭಾನುವಾರ ಹಿರಿಯ ನಾಗರಿಕರೊಬ್ಬರು ರಾಮಮೂರ್ತಿನಗರದಲ್ಲಿ ಬಿಎಂಟಿಸಿ ಬಸ್‌ ಹತ್ತಿ ಶಿವಾಜಿನಗರಕ್ಕೆ ಟಿಕೆಟ್‌ ಪಡೆದಿದ್ದರು. ಬಸ್‌ ಶಿವಾಜಿನಗರದ ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಂದಿದ್ದು, ಎಲ್ಲ ಪ್ರಯಾಣಿಕರು ಬಸ್‌ ಇಳಿದಿದ್ದರು. ಆದರೆ, ಈ ಹಿರಿಯ ನಾಗರಿಕ ಮೂರ್ಚೆ ರೋಗದಿಂದ ಅಸ್ವಸ್ಥರಾಗಿದ್ದರು. ಈ ವೇಳೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಎಂಟಿಸಿ ಸಿಬ್ಬಂದಿ ಪರದಾಡಿದರು.

ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ಈ ಘಟನೆ ಸಂಬಂಧ ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕಿ ಚಂದ್ರಕಲಾ ವಿರುದ್ಧ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ. ಬಿಎಂಟಿಸಿಯ ಎಲ್ಲ ಬಸ್‌ ನಿಲ್ದಾಣಗಳಲ್ಲಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶಿಸಲಾಗಿದೆ.