ಸಾರಾಂಶ
ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ
ಬೆಂಗಳೂರು : ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್‌ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಪಡೆ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
ನೂತನ ಅರಣ್ಯ ಪಡೆ ಮುಖ್ಯಸ್ಥೆಯಾಗಿ ನೇಮಕಗೊಂಡ ಮೀನಾಕ್ಷಿ ನೇಗಿ ಗುರುವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಈಶ್ವರ್ ಖಂಡ್ರೆ ಅವರು ಮೀನಾಕ್ಷಿ ನೇಗಿ ಅವರನ್ನು ಅಭಿನಂದಿಸಿದರು.