ಪರಪ್ಪನ ಅಗ್ರಹಾರ ಜೈಲಿನಿಂದ ಕೈದಿ ಶಂಕರ್ ಬಿಡುಗಡೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕಿದ್ದು, ಕೈದಿ ಶಂಕರ್‌ನ ಪತ್ನಿಯನ್ನು ಪರಪ್ಪನ ಅಗ್ರಹಾರ ಕಾರಾಗೃಹದ ಅಂದಿನ ಮುಖ್ಯ ಅಧೀಕ್ಷಕ ಸೋಮಶೇಖರ್ ಮತ್ತು ಜೈಲಿನಲ್ಲಿ ಎಫ್‌ಡಿಎ ಆಗಿದ್ದ ಶ್ರೀಕಾಂತ್ ಲೈಂಗಿಕವಾಗಿ ಬಳಸಿಕೊಂಡು ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆ ವೇಳೆ ಬೆಳಕಿಗೆ
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಪರಪ್ಪನ ಅಗ್ರಹಾರ ಜೈಲಿನಿಂದ ಕೈದಿ ಶಂಕರ್ ಬಿಡುಗಡೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕಿದ್ದು, ಕೈದಿ ಶಂಕರ್‌ನ ಪತ್ನಿಯನ್ನು ಪರಪ್ಪನ ಅಗ್ರಹಾರ ಕಾರಾಗೃಹದ ಅಂದಿನ ಮುಖ್ಯ ಅಧೀಕ್ಷಕ (ಡಿಐಜಿ) ಸೋಮಶೇಖರ್ ಮತ್ತು ಜೈಲಿನಲ್ಲಿ ಎಫ್‌ಡಿಎ ಆಗಿದ್ದ ಶ್ರೀಕಾಂತ್ ಲೈಂಗಿಕವಾಗಿ ಬಳಸಿಕೊಂಡು ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ಉತ್ತರ ವಲಯದ ಕಾರಾಗೃಹ ಇಲಾಖೆಯ ಡಿಐಜಿಯಾಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸೋಮಶೇಖರ್‌ನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
3ಕ್ಕೇರಿದ ಬಂಧಿತರ ಸಂಖ್ಯೆ:
ಆರೋಪಿಗಳಾದ ಶ್ರೀಕಾಂತ್ ಹಾಗೂ ಡಿಐಜಿ ಸೋಮಶೇಖರ್ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಸುಪ್ರೀಂಕೋರ್ಟ್‌ನ ಆದೇಶ ನಕಲು ಮಾಡಿ ಕೈದಿ ಎ.ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಎ.ಶಂಕರ್ (ಕೈದಿ) ಹಾಗೂ ಜೈಲಿನಲ್ಲಿ ಎಫ್‌ಡಿಎ ಆಗಿದ್ದ ಶ್ರೀಕಾಂತ್‌ನನ್ನು ಬಂಧಿಸಲಾಗಿತ್ತು. ಶ್ರೀಕಾಂತ್ ನೀಡಿದ ಹೇಳಿಕೆಯನ್ನು ಆಧರಿಸಿ ಸೋಮಶೇಖರ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ಆದೇಶವನ್ನು ನಕಲು ಮಾಡಿ ಶಿಕ್ಷಾ ಬಂಧಿ ಶಂಕರ್ ಪರಪ್ಪನ ಅಗ್ರಹಾರ ಜೈಲಿನಿಂದ 2018 ರಲ್ಲಿ ಬಿಡುಗಡೆಯಾಗಿದ್ದ. ಶಂಕರ್ ಬಿಡುಗಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಕಾರಾಗೃಹ ಡಿಜಿಪಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿ ಅಧಿಕಾರಿಗಳಿಗೆ ಸೂಚಿಸಿದ್ದರು. ತನಿಖೆ ನಡೆಸಿದಾಗ ಜೈಲಿನಲ್ಲಿ ಎಫ್‌ಡಿಎ ಆಗಿದ್ದ ಶ್ರೀಕಾಂತ್ ಸುಪ್ರೀಂ ಕೋರ್ಟ್‌ನ ಆದೇಶ ನಕಲು ಮಾಡಿ ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ಬೆಳಕಿಗೆ ಬಂದಿತ್ತು. ಆರೋಪಿ ಶ್ರೀಕಾಂತ್‌ನನ್ನು ಹೆಚ್ಚಿನ ವಿಚಾರಣೆ ನಡೆಸಿದ್ದಾಗ ಡಿಐಜಿ ಸೋಮಶೇಖರ್ ಹೆಸರು ಬಾಯ್ಬಿಟ್ಟಿದ್ದ. ಪ್ರಕರಣದಲ್ಲಿ ಸೋಮಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನಿಖೆಗೆ ಸಹಕರಿಸದೆ ಪ್ರಕರಣದ ಮಾಹಿತಿ ಮರೆಮಾಚಿದ ಕಾರಣಕ್ಕೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಪ್ರಕರಣ?:
ಚಿಕ್ಕಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ಅಪರಾಧಿ ಶಂಕರ್‌ಗೆ 2004 ರಲ್ಲಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರು. ದಂಡವನ್ನು ನ್ಯಾಯಾಲಯ ವಿಧಿಸಿತ್ತು. ಶಿಕ್ಷೆ ರದ್ದು ಪಡಿಸುವಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.
ಕೇಂದ್ರ ಕಾರಾಗೃಹದ ಶಿಕ್ಷಾಬಂಧಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಕಾಂತ್ ಮತ್ತು ಡಿಐಜಿ ಸೋಮಶೇಖರ್ 2018ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಬಿಡುಗಡೆ ಆದೇಶವಾಗಿರುವ ರೀತಿ ಪ್ರತಿಯನ್ನು ನಕಲು ಮಾಡಿ, ಶಿಕ್ಷಾ ಬಂಧಿ ಶಂಕರ್ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- ಸುಪ್ರೀಂಕೋರ್ಟ್‌ನಿಂದ ಜಾಮೀನು ಸಿಕ್ಕಿದೆ ಎಂದು 2018ರಲ್ಲಿ ಶಂಕರ್ ಎಂಬ ಕೈದಿ ಜೈಲಿಂದ ಬಿಡುಗಡೆಯಾಗಿದ್ದ
- ಆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕಾರಾಗೃಹ ಡಿಜಿಪಿಗೆ ವ್ಯಕ್ತಿಯೊಬ್ಬರು ದೂರು ಸಲ್ಲಿಸಿದ್ದರು. ತನಿಖೆಗೆ ಆದೇಶ ಆಗಿತ್ತು
- ಜೈಲಿನ ಎಫ್‌ಡಿಎ ಶ್ರೀಕಾಂತ್ ಎಂಬಾತ ಸುಪ್ರೀಂ ಜಾಮೀನು ಆದೇಶವನ್ನೇ ನಕಲಿ ಮಾಡಿರುವುದು ಬೆಳಕಿಗೆ ಬಂದಿತ್ತು
- ಶ್ರೀಕಾಂತ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಡಿಐಜಿ ಸೋಮಶೇಖರ್ ಹೆಸರನ್ನು ಆತ ಬಹಿರಂಗಪಡಿಸಿದ್ದ
- ಕೈದಿ ಶಂಕರ್ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಅದಕ್ಕೆ ಪ್ರತಿಯಾಗಿ ನಕಲಿ ಜಾಮೀನು ಸೃಷ್ಟಿಸಿರುವುದು ಬೆಳಕಿಗೆ

