ಸಾರಾಂಶ
ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳು ಗುರುವಾರ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದರು
ಚಿತ್ರದುರ್ಗ : ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳು ಗುರುವಾರ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದರು.
ನಗರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಶ್ರವಣದೋಷ ಇರುವ ಮುರುಘಾ ಶ್ರೀಗಳು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಬದಲು, ವೈಯಕ್ತಿಕವಾಗಿ ಹಾಜರಾಗಿ ಹೇಳಿಕೆ ದಾಖಲಿಸಲು ನ್ಯಾಯಾಲಯ ಅವರಿಗೆ ಆದೇಶಿಸಿತ್ತು.
ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಶ್ರೀಗಳ ಜೊತೆ ಹಾಸ್ಟೆಲ್ ವಾರ್ಡನ್ ರಶ್ಮಿ, ಮಠದ ಮ್ಯಾನೇಜರ್ ಪರಮ ಶಿವಯ್ಯ ಕೂಡಾ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಿದರು. ನ್ಯಾಯಾಧೀಶ ಜಿ.ಸಿ.ಹಡಪದ್ ಮುರುಘಾಶ್ರೀ ವಿಚಾರಣೆ ನಡೆಸಿದರು.