ಬೆಂಗಳೂರಿನಲ್ಲಿ ದೀರ್ಘಕಾಲದಿಂದ ಕಾವೇರಿ ನೀರಿನ ಬಿಲ್ ಬಾಕಿದಾರರಿಗೆ ಒಂದು ಬಾರಿ ಬಡ್ಡಿ, ದಂಡ ಸಂಪೂರ್ಣ ಮನ್ನಾಕ್ಕೆ ‘ಒನ್ ಟೈಮ್ ಸೆಟಲ್‌ಮೆಂಟ್’(ಒಟಿಎಸ್) ಯೋಜನೆ ಜಾರಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ದೀರ್ಘಕಾಲದಿಂದ ಕಾವೇರಿ ನೀರಿನ ಬಿಲ್ ಬಾಕಿದಾರರಿಗೆ ಒಂದು ಬಾರಿ ಬಡ್ಡಿ, ದಂಡ ಸಂಪೂರ್ಣ ಮನ್ನಾಕ್ಕೆ ‘ಒನ್ ಟೈಮ್ ಸೆಟಲ್‌ಮೆಂಟ್’(ಒಟಿಎಸ್) ಯೋಜನೆ ಜಾರಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ನೀರಿನ ಬಿಲ್ಲು ಬಾಕಿ
ನಗರದಲ್ಲಿ ಹಲವು ವರ್ಷದಿಂದ ನೀರಿನ ಬಿಲ್ಲು ಬಾಕಿ ಉಳಿಸಿಕೊಂಡವರಿಗೆ ಅಸಲು ಮೊತ್ತದ ಮೇಲಿನ ಬಡ್ಡಿ ಮತ್ತು ದಂಡದ ಮೊತ್ತ ಸಂಪೂರ್ಣವಾಗಿ ವಿನಾಯಿತಿ ನೀಡಿದೆ. ಬಾಕಿ ಬಿಲ್ಲು ಪಾವತಿಗೆ 2026ರ ಜನವರಿ, ಫೆಬ್ರವರಿ ಮತ್ತು ಮಾರ್ಚ್ ಮೂರು ತಿಂಗಳು ಅವಕಾಶ ನೀಡಲಾಗಿದೆ. ಗ್ರಾಹಕರೇ ನೇರವಾಗಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದಕ್ಕಾಗಿ ಹೊಸ ಆ್ಯಪ್ ರಚನೆ ಸಹ ಮಾಡಲಾಗುತ್ತಿದೆ.
ಸರ್ಕಾರಿ ಕಟ್ಟಡಗಳು ಮತ್ತು ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಮಾಹಿತಿ
ಸರ್ಕಾರಿ ಕಟ್ಟಡಗಳು ಮತ್ತು ವಾಣಿಜ್ಯ ಮಳಿಗೆಗಳಿಗೆ ಜಲಮಂಡಳಿಯ ವಿಶೇಷ ತಂಡವೇ ಖುದ್ದು ಭೇಟಿ ನೀಡಿ ಮಾಹಿತಿ ನೀಡಲಿದೆ. ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಸಂಪರ್ಕಿಸುತ್ತಾರೆ ಹಾಗೂ ವೆಬ್‌ಸೈಟ್ ಮತ್ತು ಆ್ಯಪ್ ಮೂಲಕವೂ ಅವಕಾಶ ಕಲ್ಪಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
