ಬೆಂಗಳೂರು : ರಾಜ್ಯದೆಲ್ಲೆಡೆ ಮುಂಗಾರು ಮಳೆಯ ತೀವ್ರ ಕೊರತೆಯಿದೆ. ಈ ನಡುವೆ ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯ ‘ಯೆಲ್ಲೋ ಅಲರ್ಟ್’ ಅನ್ನು ಹವಾಮಾನ ಇಲಾಖೆ ನೀಡಿದೆ.

ಜೂ.23ರಿಂದ ಜೂ.25ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜೂ.23ರಿಂದ ಜೂ.25ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ.27ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಜೂ.22ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಪ್ರದೇಶಗಳು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಾತ್ರ ಮಳೆಯಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.


ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂ.ಮೀ. ಮಳೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂ.ಮೀ. ಮಳೆಯಾಗಿದೆ. ಮತ್ತೊಂದೆಡೆ ಮಳೆಗಾಲದಲ್ಲೂ ಕಲಬುರಗಿಯಲ್ಲಿ ಬೇಸಿಗೆ ಕಾಲದಂತೆ ಗರಿಷ್ಠ 39.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.