ಸಾರಾಂಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಶನಿವಾರ ನಡೆದ ಫ್ಲಾಟ್ ಮೇಳದಲ್ಲಿ ಸುಮಾರು 600ಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಿದ್ದು, 200 ಸಾರ್ವಜನಿಕರು ಫ್ಲಾಟ್‌ನ ಪ್ರಾರಂಭಿಕ ಠೇವಣಿಯನ್ನು ಸ್ಥಳದಲ್ಲಿಯೇ ಪಾವತಿಸಿ, ಹಂಚಿಕೆ ಪತ್ರವನ್ನು ಪಡೆದಿದ್ದಾರೆ. 50 ಮಂದಿ ಚೆಕ್ ನೀಡಿದ್ದು, ಸೋಮವಾರ ಆರ್.ಟಿ.ಜಿ.ಎಸ್. ಮೂಲಕ ಪಾವತಿಸಿದ ನಂತರ ಹಂಚಿಕೆ ಪತ್ರವನ್ನು ನೀಡಲಾಗುವುದು. ಪ್ರಸ್ತುತ ಫ್ಲಾಟ್‌ನ ದರವು ಹಳೆಯದಾಗಿದ್ದು ಸದ್ಯದಲ್ಲಿಯೇ ಪರಿಷ್ಕರಿಸಲಾಗುವುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯನ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಎಚ್.ಡಿ.ಎಫ್.ಸಿ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದರು.
ಬಿಡಿಎ ಆರ್ಥಿಕ ಸದಸ್ಯ ಎ.ಲೋಕೇಶ್, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಮೂರ್ತಿ, ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಇಂಬವಳ್ಳಿ, ಬಸವರೆಡ್ಡಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ಫೋಟೋ ಕ್ಯಾಪ್ಷನ್
ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳದಲ್ಲಿ ಬಿಡಿಎ ಆರ್ಥಿಕ ಸದಸ್ಯ ಎ.ಲೋಕೇಶ್, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಮೂರ್ತಿ ಸಾರ್ವಜನಿಕರಿಗೆ ಹಂಚಿಕೆ ಪತ್ರವನ್ನು ವಿತರಿಸಿದರು.