ಸಾರಾಂಶ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬಸ್ ದರವೂ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಜಯಪುರ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬಸ್ ದರವೂ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ರಾಜ್ಯ ಸರ್ಕಾರ ಡಿಸೇಲ್ ದರ ₹2 ಹೆಚ್ಚಳ ಮಾಡಿತ್ತು. ಅಲ್ಲದೆ ಕೇಂದ್ರ ಸರ್ಕಾರವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮದರೊಂದಿಗೆ ಮಾತನಾಡುವಾಗ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಹೇಳಿ ಆಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದರು.
ಎರಡು ವರ್ಷದ ಅವಧಿಯಲ್ಲಿ 1031 ಬಸ್ ಖರೀದಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 2000 ಬಸ್ ಖರೀದಿ ಮಾಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ ಹೊಸ ಬಸ್‌ಗಳನ್ನ ನೀಡಲಾಗುವುದು ಎಂದ ಅವರು, ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರ ₹೨ ಸಾವಿರ ಕೋಟಿ ಸಾಲ ಕೊಡಿಸಿದೆ. ಈ ಸಾಲ ರಾಜ್ಯ ಸರ್ಕಾರವೇ ಭರಿಸುತ್ತದೆ ಎಂದು ಹೇಳಿದರು.ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗುತ್ತಾರೆಂಬ ವಿಷಯಕ್ಕೆ ಸಂಬಂಧಿಸಿದಂತೆ ನಾನು ಉತ್ತರ ನೀಡುವುದಿಲ್ಲ. ಈ ವಿಷಯವಾಗಿ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದರು.ಉತ್ತರ ಕರ್ನಾಟಕದವರು ಸಿಎಂ ಆಗುವ ಯೋಗ ಇದೆ ಎಂಬ ಕೋಡಿಮಠದ ಶ್ರೀಗಳ ಭವಿಷ್ಯದ ಬಗ್ಗೆ ಪ್ರತಿಕ್ರಿಯಿಸಿ, ನನಗೆ ಭವಿಷ್ಯವಾಣಿಯಲ್ಲಿ ನಂಬಿಕೆ ಇಲ್ಲ. ಆದರೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸಂತೋಷಪಡುವವರಲ್ಲಿ ನಾನು ಸಹ ಒಬ್ಬ ಎಂದು ತಿಳಿಸಿದರು.
)
)
)
;Resize=(128,128))
;Resize=(128,128))
;Resize=(128,128))
;Resize=(128,128))