ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯ್ತಿ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲೂ ಇವಿಎಂ ಬದಲಿಗೆ ಮತಪತ್ರ ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ವಿಧೇಯಕ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು : ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯ್ತಿ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲೂ ಇವಿಎಂ(ಎಲೆಕ್ಟ್ರಾನಿಕ್‌ ಮತಯಂತ್ರ) ಬದಲಿಗೆ ಮತಪತ್ರ (ಬ್ಯಾಲೆಟ್‌ ಪೇಪರ್‌) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ವಿಧೇಯಕ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರದ ನಿರ್ಧಾರ

ರಾಜ್ಯ ಸರ್ಕಾರದ ನಿರ್ಧಾರದ ಅನ್ವಯ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರ ಬದಲು ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಚುನಾವಣಾ ಆಯೋಗ ಇತ್ತೀಚೆಗೆ ನಿರ್ಧಾರ ಮಾಡಿತ್ತು.

ಬ್ಯಾಲೆಟ್‌ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ

ಇದೀಗ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತಿ ಚುನಾವಣೆಯಲ್ಲೂ ಬ್ಯಾಲೆಟ್‌ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಬಳಿಕ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್‌, ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಬಳಕೆಗೆ ನಿರ್ಧರಿಸಲಾಗಿದೆ. ಇದೇ ರೀತಿ ಪಂಚಾಯ್ತಿಗಳ ಚುನಾವಣೆಗೂ ಬ್ಯಾಲೆಟ್‌ ಪೇಪರ್‌ ಬಳಕೆ ಮಾಡಲು ತಿದ್ದುಪಡಿ ಕಾಯಿದೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

- ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕಕ್ಕೆ ಅಸ್ತು

- ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಲೇ ಬಂದಿರುವ ಕಾಂಗ್ರೆಸ್‌

- ಮಹಾರಾಷ್ಟ್ರ, ಬಿಹಾರ ಚುನಾವಣೆಯ ಬಳಿಕ ಇವಿಎಂ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ

- ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್‌ ಪತ್ರ ಬಳಸಲು ನಿರ್ಧಾರ

- ಗ್ರೇಟರ್‌ ಬೆಂಗಳೂರು ಚುನಾವಣೆಯಲ್ಲಿ ಇವಿಎಂ ಬಳಸಲ್ಲ ಎಂದು ಹೇಳಿದ್ದ ರಾಜ್ಯ ಆಯೋಗ

- ಈಗ ಗ್ರಾಪಂ, ತಾಪಂ, ಜಿಪಂ ಚುನಾವಣೆಯಲ್ಲೂ ಇವಿಎಂ ಬಳಸದೇ ಇರಲು ಸರ್ಕಾರ ತೀರ್ಮಾನ