ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಕೆಪಿಎಸ್ ಶಾಲೆಗಳಿಗೆ ಮಕ್ಕಳಿಗೆ ಅನುಕೂಲವಾಗಲೆಂದು ಕರೆತರಲು ಮತ್ತು ಬಿಡಲು ಸ್ವಂತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಆನವಟ್ಟಿ (ಶಿವಮೊಗ್ಗ) : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಕೆಪಿಎಸ್ ಶಾಲೆಗಳಿಗೆ ಮಕ್ಕಳಿಗೆ ಅನುಕೂಲವಾಗಲೆಂದು ಕರೆತರಲು ಮತ್ತು ಬಿಡಲು ಸ್ವಂತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ
ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಿಂದ ಶಾಲೆ-ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಸುಮಾರು 4000 ಕೋಟಿ ರು. ವೆಚ್ಚ
ಸುಮಾರು 4000 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 1000 ಕೆಪಿಎಸ್ ಶಾಲೆಗಳನ್ನು ರಾಜ್ಯದಲ್ಲಿ ತೆರೆಯಲು ಉದ್ದೇಶಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಹೊಸದಾಗಿ 24 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗುವುದು ಎಂದರು.

