ಸಾರಾಂಶ
7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು : ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿರುವುದು ಸೇರಿದಂತೆ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಹೊಣೆ:
ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ, ಡಾ.ಎಸ್.ಸೆಲ್ವಕುಮಾರ್ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿದೆ. ಡಿಪಿಎಆರ್(ಇ-ಆಡಳಿತ) ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರನ್ನು ಕೆಐಎಡಿಬಿ ಸಿಇಒ ಮತ್ತು ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅರ್ಚನಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಯಕಾರಿ ಸದಸ್ಯರಾಗಿದ್ದ ಡಾ.ಎನ್.ಶಿವಶಂಕರ್ ಅವರನ್ನು ನಗರಾಡಳಿತ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.